ಸಾರಿಗೆ ಸಚಿವ ಬೈರತಿ ಸುರೇಶ್ 
ರಾಜ್ಯ

ರಾಜ್ಯದ ಜನತೆಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆ ಶಾಕ್! ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ

ವಿಧಾನಪರಿಷತ್ ನಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್, ಗುರುವಾರ ಹೇಳಿಕೆ ನೀಡಿದ್ದು, ಬಸ್ ಪ್ರಯಾಣದ ಟಿಕೆಟ್ ದರ ಪರಿಷ್ಕರಣೆ ಮಾಡುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂ. ಹೆಚ್ಚಿಸಲು ಸರ್ಕಾರ ಸಮ್ಮತಿ ನೀಡಿರುವ ಬೆನ್ನಲ್ಲೇ ಇದೀಗ ಬಸ್ ಪ್ರಯಾಣ ದರ ಏರಿಕೆ ಯಾಗುವ ಸಾಧ್ಯತೆ ಹೆಚ್ಚಾಗಿದೆ.

ಈ ಕುರಿತು ವಿಧಾನಪರಿಷತ್ ನಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್, ಗುರುವಾರ ಹೇಳಿಕೆ ನೀಡಿದ್ದು, ಬಸ್ ಪ್ರಯಾಣದ ಟಿಕೆಟ್ ದರ ಪರಿಷ್ಕರಣೆ ಮಾಡುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಯುವ ವೇಳೆ ಹಾಲಿನ ದರ ಏರಿಕೆ ಪ್ರಸ್ತಾಪ ಬಂದಾಗ ಮಾತನಾಡಿದ ಸಚಿವರು, ಡೀಸೆಲ್ ದರ ನಾಲ್ಕು ಬಾರಿ ಏರಿಕೆಯಾಗಿದೆ. ವಿರೋಧ ಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಿರಲಿಲ್ಲ. ಆದರೆ, ಈಗ ಏರಿಕೆ ಅನಿವಾರ್ಯವಾಗಿದೆ ಎಂದರು.

ಸಾರಿಗೆ ನಿಗಮಗಳು ಸುಮಾರು 8,000 ಕೋಟಿ ನಷ್ಟದಲ್ಲಿವೆ. ಸಿಬ್ಬಂದಿಗೆ ವೇತನ ನೀಡುವುದೇ ಕಷ್ಟವಾಗಿದೆ. ನಿಗಮಗಳ ನಷ್ಟದ ಪ್ರಮಾಣದ ಹೆಚ್ಚಳದಿಂದಾಗಿ ಹೊಸ ನೇಮಕಾತಿ ಪ್ರಕ್ರಿಯೆಗಳಿಗೂ ತೊಡಕಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

Toxic ಬೆನ್ನಲ್ಲೇ ಭಾರೀ ಹೈಪ್ ಕ್ರಿಯೆಟ್ ಮಾಡಿದ್ದ Paradiseಗೆ ತೆಲುಗರಿಂದಲೇ ತರಾಟೆ; ಆದರೂ ಮೊದಲ ದಿನ ದಾಖಲೆ ಕಲೆಕ್ಷನ್!

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆ

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು; Video

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗಕ್ಕೆ BJP ಶಾಸಕ ಪತ್ರ: ಬಿ.ಕೆ ಹರಿಪ್ರಸಾದ್ ರಿಂದ ದಾಖಲೆ ಬಿಡುಗಡೆ!