ಸಾಂದರ್ಭಿಕ ಚಿತ್ರ  
ರಾಜ್ಯ

ಉತ್ತರ ಭಾರತದ 4 ರಾಜ್ಯಗಳ ಅಭ್ಯರ್ಥಿಗಳನ್ನು ಇನ್ನು ಮುಂದೆ ನೇಮಿಸಿಕೊಳ್ಳುವುದಿಲ್ಲ ಎಂದ ಬೆಂಗಳೂರಿನ ಉದ್ಯಮಿ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆ

ಎ1 ಸ್ಪೋರ್ಟ್ಸ್ ವರ್ಲ್ಡ್‌ನ ಸಂಸ್ಥಾಪಕ ಕಾರ್ತಿಕ್ ಎಸ್‌ಜಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಉತ್ತರ ಭಾರತದ ನಾಲ್ಕು ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಮಧ್ಯಪ್ರದೇಶ ಯಾವುದೇ ಪುರುಷ ಅಭ್ಯರ್ಥಿಗಳನ್ನು ಇನ್ನು ಮುಂದೆ ನೇಮಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.

ಬೆಂಗಳೂರು: ತನ್ನ ಕಂಪನಿಯಲ್ಲಿ ತಾರತಮ್ಯಪೂರಿತ ನೇಮಕಾತಿ ನೀತಿಯನ್ನು ಜಾರಿಗೆ ತರುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬೆಂಗಳೂರಿನ ಉದ್ಯಮಿಯೊಬ್ಬರು ಟೀಕೆಗೆ ಗುರಿಯಾಗಿದ್ದಾರೆ.

ಎ1 ಸ್ಪೋರ್ಟ್ಸ್ ವರ್ಲ್ಡ್‌ನ ಸಂಸ್ಥಾಪಕ ಕಾರ್ತಿಕ್ ಎಸ್‌ಜಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಉತ್ತರ ಭಾರತದ ನಾಲ್ಕು ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಮಧ್ಯಪ್ರದೇಶ ಯಾವುದೇ ಪುರುಷ ಅಭ್ಯರ್ಥಿಗಳನ್ನು ಇನ್ನು ಮುಂದೆ ನೇಮಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.

ಸುದೀರ್ಘ ಚರ್ಚೆ ಮತ್ತು ವಾಗ್ವಾದದ ಬಳಿಕ ಕಂಪನಿಯ ನಿರ್ಧಾರ ಕೈಗೊಳ್ಳುವವರು ಈ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದಾರೆ ಎಂದು ಕಾರ್ತಿಕ್ ಅವರ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಅವರು, ನಮ್ಮಲ್ಲಿ ಈಗಾಗಲೇ ಒಬ್ಬ ರಾಜಸ್ಥಾನಿ ಮಹಿಳೆ ಕೆಲಸ ಮಾಡುತ್ತಿದ್ದಾರೆ. ಅವರು ಕೂಡ ಶೇ.100ರಷ್ಟು ಇದನ್ನು ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತ ಪ್ರತಿಕ್ರಿಯೆಗಳು ವ್ಯಕ್ತವಾದ ಬಳಿಕ ಕಾರ್ತಿಕ್ ಸ್ಪಷ್ಟನೆ ನೀಡಿದರು. ಈ ನಿರ್ಧಾರಕ್ಕೆ ಕಾರಣವಾದ ಗೊಂದಲವು ಒಂದೆರಡು ವಾರಗಳ ಹಿಂದೆ ಆರಂಭವಾಯಿತು ಎಂದು ಹೇಳಿದ್ದಾರೆ.

ನಾಲ್ಕು ರಾಜ್ಯಗಳ ಪೈಕಿ ಒಂದಕ್ಕೆ ಸೇರಿದ ಉದ್ಯೋಗಿಯೊಬ್ಬರನ್ನು, ಕಂಪನಿಯ ಮಹಿಳಾ ಉದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕಾಗಿ ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕ ಕೆಲಸದಿಂದ ವಜಾಗೊಳಿಸಲಾಗಿತ್ತು. ಅಲ್ಲದೆ, ತನ್ನ ಮಹಿಳಾ ಸಹೋದ್ಯೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದ ಎಂದು ಆರೋಪಿಸಲಾಗಿದೆ.

ನಾವು ಯುವಜನರೊಂದಿಗೆ ಕೆಲಸ ಮಾಡುತ್ತೇವೆ. ಇಂತಹ ಮನಸ್ಥಿತಿ ಹೊಂದಿರುವ ಪುರುಷರು ಅವಕಾಶ ಪಡೆಯಲು ಅರ್ಹರು ಎಂದು ನೀವು ಭಾವಿಸುತ್ತೀರಾ ಎಂದು ಕಾರ್ತಿಕ್ ಪೋಸ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ತಮ್ಮ ಪೋಸ್ಟ್‌ಗೆ ಬಂದ ವಿರುದ್ಧ ಪ್ರತಿಕ್ರಿಯೆಗಳಲ್ಲಿ ಸುಮಾರು ಶೇ.85–90ರಷ್ಟು ಪ್ರತಿಕ್ರಿಯೆಗಳು ಬಿಹಾರ ಮೂಲದ ಬಳಕೆದಾರರಿಂದ ಬಂದಿವೆ ಎಂದು ಕಾರ್ತಿಕ್ ಹೇಳಿದ್ದಾರೆ.

ನಮ್ಮಲ್ಲಿ 32 ಉದ್ಯೋಗಿಗಳಿದ್ದಾರೆ. ಅವರಲ್ಲಿ 14 ಮಂದಿ ಮಹಿಳೆಯರು. ಒಟ್ಟು 20 ಮಂದಿ ಇತರ ರಾಜ್ಯಗಳಿಂದ ಬಂದವರಾಗಿದ್ದು, ಅವರಲ್ಲಿ 12 ಮಂದಿ ದಕ್ಷಿಣೇತರ ರಾಜ್ಯಗಳವರು. ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್ ಮತ್ತು ಬೌದ್ಧ ಸೇರಿದಂತೆ ಎಲ್ಲ ಧರ್ಮಗಳ ನಂಬಿಕೆಗಳನ್ನು ಹೊಂದಿರುವವರು ನಮ್ಮಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳ ನಿರ್ಬಂಧ ಸಂವಿಧಾನಬಾಹಿರ: ವೈಟ್ ಹೌಸ್ ಮಾಧ್ಯಮ ನಿಷೇಧಕ್ಕೆ ಕೋರ್ಟ್ ತಡೆ: ಟ್ರಂಪ್ ಆಡಳಿತಕ್ಕೆ ಮುಖಭಂಗ..!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ