ಮೆಹಬೂಬಸಾಬ್ ಪಟ್ಟೆವಾಲೆ 
ರಾಜ್ಯ

ಕ್ಷುಲ್ಲಕ ಕಾರಣಕ್ಕೆ ಪರಪ್ಪನ ಅಗ್ರಹಾರ ಜೈಲಿನ ಹೆಡ್ ವಾರ್ಡರ್‌ನಿಂದ ಗಂಭೀರ ಹಲ್ಲೆ; ಡಾಬಾ ಮಾಲೀಕ ಸಾವು!

ಮೃತ ಡಾಬಾ ಮಾಲೀಕರನ್ನು ಮೆಹಬೂಬಸಾಬ್ ಪಟ್ಟೆವಾಲೆ(58) ಎಂದು ಗುರುತಿಸಲಾಗಿದೆ.

ಬಾಗಲಕೋಟೆ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಹೆಡ್ ವಾರ್ಡರ್, ಕ್ಷುಲ್ಲಕ ಕಾರಣಕ್ಕೆ ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಗದ್ದನಕೇರಿ ಕ್ರಾಸ್‌ ಬಳಿಯ ಡಾಬಾ ಮಾಲೀಕರೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ‌

ಮೃತ ಡಾಬಾ ಮಾಲೀಕರನ್ನು ಮೆಹಬೂಬಸಾಬ್ ಪಟ್ಟೆವಾಲೆ(58) ಎಂದು ಗುರುತಿಸಲಾಗಿದೆ.

ರಜೆ ಮೇಲೆ ಊರಿಗೆ ಬಂದಿದ್ದ ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅಡಿವೆಪ್ಪ ಅವರು ಸೆಪ್ಟೆಂಬರ್ 17 ರಂದು ರಾತ್ರಿ ಮೆಹಬೂಬಸಾಬ್ ಅವರ ಡಾಬಾಗೆ ಬಂದು ಊಟ ಕೇಳಿದ್ದಾರೆ. ಈ ವೇಳೆ ಊಟ ಖಾಲಿಯಾಗಿದೆ ಎಂದಿದ್ದಕ್ಕೆ ಜಗಳ ತೆಗೆದಿದ್ದ ವಾರ್ಡರ್‌, ಡಾಬಾ ಮಾಲೀಕರ ಮೇಲೆ ಗಂಭೀರ ಹಲ್ಲೆ ನಡೆಸಿದ್ದರು.

ಹಲ್ಲೆಯಿಂದ ಗಾಯಗೊಂಡ ಮೆಹಬೂಬ್‌ ಸಾಬ್ ಅವರಿಗೆ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣವೇ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಈ ಗಲಾಟೆಯಲ್ಲಿ ಹೆಡ್ ವಾರ್ಡರ್ ಅಡಿವೆಪ್ಪ ಅವರ ತಲೆಗೂ ಗಾಯಗಳಾಗಿದ್ದವು ಎಂದು ತಿಳಿದುಬಂದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಲಾದಗಿ ಠಾಣೆ ಪೊಲೀಸರು, ಆರೋಪಿ ಅಡಿವೆಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ವಿಪಕ್ಷಗಳು: ಸಂಸತ್ತಿನ ಉಭಯ ಸದನಗಳಲ್ಲಿ ಮಹಾಭಿಯೋಗ ನಿರ್ಣಯ ಮಂಡಿಸಲು ಮುಂದು!

'ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ': ದೇಶ ದ್ರೋಹಿ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಲಿ; 48 ಗಂಟೆಗಳ ಗಡುವು ನೀಡಿದ CJP!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿಗರ ಗಡಿಪಾರು!

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್