ಲೋಕಾಯುಕ್ತ (ಸಂಗ್ರಹ ಚಿತ್ರ) 
ರಾಜ್ಯ

ತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!

30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ತುಮಕೂರು: 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಅವರು ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು.

ಈ ಕೆಲಸಕ್ಕಾಗಿ ನಾಗೇಶ್ 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ 35 ಸಾವಿರ ಪಡೆದಿದ್ದ ನಾಗೇಶ್ ಎರಡನೇ ಕಂತಿನ 30 ಸಾವಿರವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಎಸ್‌ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ವೀಸಾ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: ವಿದೇಶಿ ಪ್ರಯಾಣಿಕರ ಪ್ರವೇಶ ಸುಲಭ, ವಿಭಾಗಗಳು 13ರಿಂದ 9ಕ್ಕೆ ಇಳಿಕೆ!

ಕಾಶ್ಮೀರದಲ್ಲಿ ಉಗ್ರ ದಾಳಿ ಬೆನ್ನಲ್ಲೇ ಕಿಶ್ತ್ವಾರ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ನಾಪತ್ತೆ, ಶೋಧ ಕಾರ್ಯಾಚರಣೆ!

HDK, ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ: ಸಿಎಂ ಡಿಕೆ ಶಿವಕುಮಾರ್

ಯಾವ ಮುಖ ಹೊತ್ತು ಅಯೋಧ್ಯ ರಾಮಮಂದಿರಕ್ಕೆ ಹೋಗುತ್ತೀರಿ: ಅಖಿಲೇಶ್ ಯಾದವ್‌ಗೆ ಕುಟುಕಿದ ಓವೈಸಿ

ಬೆಲೆ ಏರಿಕೆ ರಾಜ್ಯದ ಜನತೆಗೆ 6ನೇ ಗ್ಯಾರೆಂಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ