ನೀರು ಸೇದಿ ಬಕೆಟ್ ನಲ್ಲಿ ತರುತ್ತಿರುವ ಮಕ್ಕಳು  
ರಾಜ್ಯ

ಇಲ್ಲಿ ಮಕ್ಕಳೇ, 100 ಅಡಿ ಆಳ ಬಾವಿಯಿಂದ ನೀರು ಸೇದಿ ತರಬೇಕು; ಹೊನ್ನಾವರ ಶಾಲೆಯ ವಿದ್ಯಾರ್ಥಿಗಳ ಸಂಕಷ್ಟ ಕೇಳಿ...

ವಿದ್ಯಾರ್ಥಿಗಳ ಈ ಸಂಕಷ್ಟದ ಫೋಟೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಶಾಲೆ ಹಾಗೂ ಜಿಲ್ಲಾಡಳಿತದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಡಿಕೆ ಶಿರೂರು (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ 8 ಕಿ.ಮೀ. ದೂರದಲ್ಲಿರುವ ಹೊಡಿಕೆ ಶಿರೂರಿನ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶೌಚಾಲಯಕ್ಕೆ ನೀರು ಪೂರೈಸಲು ಬಾವಿಯಿಂದ ನೀರು ಸೇದಿ ತರುವ ಪರಿಸ್ಥಿತಿ ಇದೆ. ಕುಡಿಯುವ ನೀರಿಗೂ ವಿದ್ಯಾರ್ಥಿಗಳೇ ನೀರು ತರುವ ಪರಿಸ್ಥಿತಿ.

ವಿದ್ಯಾರ್ಥಿಗಳ ಈ ಸಂಕಷ್ಟದ ಫೋಟೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಶಾಲೆ ಹಾಗೂ ಜಿಲ್ಲಾಡಳಿತದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಶಾಲಾ ಅಧಿಕಾರಿಗಳು ಆರೋಪಗಳನ್ನು ತಳ್ಳಿಹಾಕಿದ್ದು, ನೀರಿನ ಪೈಪ್‌ಲೈನ್‌ಗಳು ಹಾನಿಗೊಳಗಾದ ಕಾರಣ ಈ ತಾತ್ಕಾಲಿಕ ಸಮಸ್ಯೆ ಉಂಟಾಗಿದೆ ಎಂದು ಹೇಳುತ್ತಾರೆ.

ಶಾಲೆಯಿಂದ ಸುಮಾರು 100 ಅಡಿ ದೂರದಲ್ಲಿರುವ ಬಾವಿಯಿಂದ ವಿದ್ಯಾರ್ಥಿಗಳು ನೀರು ತರುತ್ತಿದ್ದಾರೆ ಎನ್ನಲಾಗಿದೆ.

ಇದು ತಾತ್ಕಾಲಿಕ ಸಮಸ್ಯೆ ಎಂದು ಶಾಲಾ ಆಡಳಿತ ಹೇಳುತ್ತಿದ್ದರೂ, ಕಳೆದ ಕೆಲವು ತಿಂಗಳುಗಳಿಂದ ಮಕ್ಕಳು ಹೀಗೆ ನೀರು ತರುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಹೆಸರು ಬಹಿರಂಗಪಡಿಸಲು ಇಚ್ಛಿಸದ ಪೋಷಕರೊಬ್ಬರು, ಇದು ತುಂಬಾ ದುಃಖಕರ ಪರಿಸ್ಥಿತಿ. ನಾವು ಮಕ್ಕಳನ್ನು ವಿದ್ಯಾಭ್ಯಾಸ ಮಾಡಲು ಶಾಲೆಗೆ ಕಳುಹಿಸುತ್ತೇವೆ. ಆದರೆ ಅವರು ಓದುವುದನ್ನು ಹೊರತುಪಡಿಸಿ ಎಲ್ಲ ಕೆಲಸಗಳನ್ನೂ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಲೆಯಲ್ಲಿ ಸ್ವಚ್ಛತೆ, ಸುರಕ್ಷತಾ ಸಮಸ್ಯೆಗಳ ಬಗ್ಗೆ ಪೋಷಕರ ಆಕ್ಷೇಪ

ಶಾಲೆಯಲ್ಲಿನ ಸ್ವಚ್ಛತೆಯ ಬಗ್ಗೆಯೂ ಮತ್ತೊಬ್ಬ ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು. ಶಾಲೆಯಲ್ಲಿನ ಎಲ್ಲ ಕೆಲಸಗಳನ್ನೂ ವಿದ್ಯಾರ್ಥಿಗಳೇ ಮಾಡುತ್ತಿದ್ದಾರೆ ಎಂದು ಹೇಳಿದರು.

ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ. ಆದರೆ ಮಕ್ಕಳು ಸ್ವಚ್ಛತೆ ಇಲ್ಲದ ಸ್ಥಳಗಳಲ್ಲಿ ಊಟ ಮಾಡುತ್ತಾರೆ ಎಂದು ಹೇಳಿದರು.

ಬಾವಿಯ ಸಮೀಪ ನೇತಾಡುತ್ತಿರುವ ವಿದ್ಯುತ್ ಕೇಬಲ್‌ ಅನ್ನು ತೋರಿಸಿದ ಅವರು, ನಮ್ಮ ಮಕ್ಕಳ ಸುರಕ್ಷತೆ ಅತ್ಯಂತ ಮುಖ್ಯ ಎಂದರು.

ಗಾಳಿ ಜೋರಾಗಿ ಬೀಸಿದಾಗಲೆಲ್ಲ ಶಾಲೆಯ ಮೇಲ್ಛಾವಣಿಯ ಹಾಳೆಗಳು ಹಾರಿ ಹೋಗುತ್ತವೆ. ಶಾಲೆಯನ್ನು ಸರಿಯಾಗಿ ನಿರ್ವಹಿಸಲಾಗುತ್ತಿಲ್ಲ, ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸದೆ ಹಾಗೆಯೇ ಬಿಡಲಾಗಿದೆ. ಶಾಲೆಯಲ್ಲಿ ಅಗತ್ಯ ಪ್ರಮಾಣದ ಪೀಠೋಪಕರಣಗಳೂ ಇಲ್ಲ ಎಂದು ಹೇಳುತ್ತಾರೆ.

ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯ ಎಂದು ಪರಿಚಯಿಸಿಕೊಂಡ ಪಟ್ಗಾರ್, ಶಾಲೆಯಲ್ಲಿ ನಡೆಯುತ್ತಿರುವುದು ಕೇವಲ ರಾಜಕೀಯ. ಇತ್ತೀಚೆಗೆ ಶಾಲೆಗೆ ಬಂದಿರುವ ಶಿಕ್ಷಕಿಯೊಬ್ಬರು ಈ ಸಮಸ್ಯೆಗೆ ಕಾರಣರಾಗಿದ್ದಾರೆ. ಅವರೇ ವಿಡಿಯೊವನ್ನು ಚಿತ್ರೀಕರಿಸಿದ್ದಾರೆ. ವಿಡಿಯೊದಲ್ಲಿ ಉಲ್ಲೇಖಿಸಿರುವ ಸಮಸ್ಯೆಗಳು ತಾತ್ಕಾಲಿಕವಾದವು ಎಂದು ಹೇಳಿದರು.

ಶಾಲೆಯಲ್ಲಿ 36 ವಿದ್ಯಾರ್ಥಿಗಳಿದ್ದು, ಕೇವಲ ನಾಲ್ವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ ಇಬ್ಬರು ಅತಿಥಿ ಶಿಕ್ಷಕರಾಗಿದ್ದಾರೆ.

ಕಾರವಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (DDPI) ಲತಾ ನಾಯಕ್ , ಪರಿಸ್ಥಿತಿಯನ್ನು ಪರಿಶೀಲಿಸಲು ಸ್ಥಳೀಯ ಬ್ಲಾಕ್ ಶಿಕ್ಷಣಾಧಿಕಾರಿಯನ್ನು ಕಳುಹಿಸಿರುವುದಾಗಿ ತಿಳಿಸಿದರು.

ಶಾಲೆಗೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿದ್ದಾರೆ. ಮಕ್ಕಳು ನೀರು ಹೊತ್ತು ತರುತ್ತಿರುವುದು ಕಂಡುಬಂದಿದೆ. ಆದರೆ ಇದು ತಾತ್ಕಾಲಿಕ ಸಮಸ್ಯೆಯಾಗಿದೆ. ನೀರಿನ ಪೈಪ್‌ಗಳು ಹಾನಿಗೊಳಗಾಗಿದ್ದು, ಪರ್ಯಾಯ ವ್ಯವಸ್ಥೆ ಇರಲಿಲ್ಲ. ಆದಷ್ಟು ಬೇಗ ಪೈಪ್‌ಗಳನ್ನು ದುರಸ್ತಿ ಮಾಡುವಂತೆ ಸೂಚಿಸಿದ್ದೇನೆ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Express) ಪತ್ರಿಕೆ ಪ್ರತಿನಿಧಿಗೆ ಹೇಳಿದರು.

ಶಾಲೆಯು ಹಲವು ವರ್ಷಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. 2020ರಲ್ಲಿಯೂ ಶಾಲೆಯ ದುಸ್ಥಿತಿಯ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!