ಸಾಂಕೇತಿಕ ಚಿತ್ರ online desk
ರಾಜ್ಯ

JDS ಮುಖಂಡ ಅಂದಾನಪ್ಪ ಮನೆಯಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ: ಪೊಲೀಸರಿಂದ ತನಿಖೆ ಆರಂಭ

ಇಂದು ಬೆಳಗ್ಗೆ ಕಟ್ಟಡದ ಆವರಣದಲ್ಲಿದ್ದ ಸ್ಟಾರ್‌ಫ್ರೂಟ್ ಮರಕ್ಕೆ ಶಾಲಿನಿಂದ ನೇಣು ಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಗಳೂರು: ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ನಿವಾಸಿ ನಾಗರಾಜ್ (65) ಎಂದು ಗುರುತಿಸಲಾಗಿದೆ. ಕಳೆದ 4-5 ವರ್ಷಗಳಿಂದ ಅಂದಾನಪ್ಪ ಅವರ ಲಗ್ಗೆರೆ ಬಳಿಯಿರುವ ಮನೆಯಲ್ಲಿ ವಾಚ್‌ಮ್ಯಾನ್ ಆಗಿ ನಾಗರಾಜ್ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ ಕಟ್ಟಡದ ಆವರಣದಲ್ಲಿದ್ದ ಸ್ಟಾರ್‌ಫ್ರೂಟ್ ಮರಕ್ಕೆ ಶಾಲಿನಿಂದ ನೇಣು ಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!