ಕಲ್ಲಡ್ಕ ಪ್ರಭಾಕರ್ ಭಟ್ 
ರಾಜ್ಯ

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

ಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಈ ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿರಂತರ ಫೋನ್ ಸಂಪರ್ಕದಲ್ಲಿದ್ದರು.

ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್​ ಅವರಿಗೆ ಶುಕ್ರವಾರ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.

ಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಈ ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿರಂತರ ಫೋನ್ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಂದು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕಲ್ಲಡ್ಕ ಪ್ರಭಾಕರ ಭಟ್​ ಅವರಿಗೆ ನೋಟಿಸ್ ನೀಡಿರುವ ಪೊಲೀಸರು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪೊಲೀಸರ ಈ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಹಿಂದೆ ವ್ಯವಸ್ಥಿತ ಸಂಚು ಎಂದು ಆರೋಪಿಸಿವೆ.

ವಿಎಚ್ ಪಿ ಕೆಂಡಾಮಂಡಲ

ಅಬ್ದುಲ್ ರೆಹಮಾನ್ ಹತ್ಯೆಗೂ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಏನು ಸಂಬಂಧ? ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಹಿಂದೂ ಸಂಘಟನೆಯನ್ನು ಟಾರ್ಗೆಟ್ ಮಾಡುತ್ತಿದೆ ಎಂದು ವಿಹೆಚ್​ಪಿ ಮುಖಂಡ ಶರಣ್ ಪಂಪ್ ವೆಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಚಾರಣೆ ನೆಪದಲ್ಲಿ ಪ್ರಭಾಕರ ಭಟ್ ಅವರನ್ನ ಬಂಧಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ಪಂಪ್ ವೆಲ್, ಎರಡು ಚಾರ್ಜ್​​ಶೀಟ್ ಆದ ಪ್ರಕರಣದಲ್ಲಿ ವಿಚಾರಣೆ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ.

ಬಿ‌.ಸಿ.ರೋಡ್ ಚಲೋ ಹಮ್ಮಿಕೊಂಡ ಬೆನ್ನಲ್ಲೇ ಈ ನೋಟಿಸ್ ನೀಡಲಾಗಿದೆ. ಇದು ಹಿಂದೂಗಳ ಧ್ವನಿಯನ್ನು ಅಡಗಿಸುವಂತಹ ಪ್ರಯತ್ನ. ಕಲ್ಲಡ್ಕ ಪ್ರಭಾಕರ​ ಭಟ್​ಗೆ ಕೊಟ್ಟ ನೋಟಿಸ್​ ಹಿಂಪಡೆಯಿರಿ. ಇಲ್ಲದಿದ್ರೆ ಹಿಂದೂ ಕಾರ್ಯಕರ್ತರು ಬೀದಿಗಿಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ:': ಪ್ರತಿಪಕ್ಷಗಳಿಗೆ CJPಯ ಅಭಿಜೀತ್ ದೀಪ್ಕೆ ಆಗ್ರಹ

ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Video