ಮಂಗಳೂರಿನ ಕಾಲೇಜಿನಲ್ಲಿ ಭೀಕರ ರ‍್ಯಾಗಿಂಗ್ AI Image
ರಾಜ್ಯ

ಮಂಗಳೂರಿನ ಕಾಲೇಜಿನಲ್ಲಿ ಭೀಕರ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಸೀನಿಯರ್ಸ್‌ ನಡೆಸಿರುವ ಅಮಾನವೀಯ ದೌರ್ಜನ್ಯ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಆ ಕುರಿತ ವರದಿ ಇಲ್ಲಿದೆ:

ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ 9 ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಸೆಪ್ಟೆಂಬರ್ 19ರಂದು, ಮಂಗಳೂರಿನ ಪಾಂಡೇಶ್ವರದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಾದ ಶ್ರೀನಿವಾಸ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿ ಅಮೀರ್ ಅಲಿ (ಕೇರಳ ಮೂಲದವರು) ತನ್ನ ಸಹಪಾಠಿ ಮೊಹಮ್ಮದ್ ಅಲ್ಫಾಜ್ ಜೊತೆಗೆ ಕಾಲೇಜಿನ ಹೊರಗಿನ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ಗಳಲ್ಲಿ ಬಂದ ಸೀನಿಯರ್ಸ್ ಗುಂಪು ಇವರನ್ನು ಬಲವಂತವಾಗಿ ಅಪಹರಿಸಿದೆ. ನಂತರ ಇಬ್ಬರನ್ನೂ ನಿರ್ಜನ ಮನೆಯೊಂದರ ಕೊಠಡಿಯಲ್ಲಿ ಕೂಡಿಹಾಕಲಾಗಿದೆ. ಕೊಠಡಿಯಲ್ಲಿ ವಿದ್ಯಾರ್ಥಿಗಳ ಬಟ್ಟೆ ಬಿಚ್ಚಿಸಿ ಚಡ್ಡಿಯಲ್ಲಷ್ಟೇ ಇರಿಸಿ, ಬೆಲ್ಟ್‌ಗಳು, ಹ್ಯಾಂಗರ್‌ಗಳು ಮತ್ತು ಕೈಗಳಿಂದ ಮನಬಂದಂತೆ ಥಳಿಸಲಾಗಿದೆ. ಹೊಡೆತದಿಂದ ಸುಸ್ತಾಗಿ ನೀರು ಕೇಳಿದಾಗ ಕಲುಷಿತ ನೀರನ್ನು ನೀಡಲಾಗಿದ್ದು, ಅದನ್ನು ಕುಡಿಯದಿದ್ದಾಗ ಮೈಮೇಲೆ ಚೆಲ್ಲಿ ವಿಕೃತಿ ಮೆರೆದಿದ್ದಾರೆ. ಈ ಇಡೀ ಕೃತ್ಯವನ್ನು ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಕೂಡ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಧ್ಯಾಹ್ನದಿಂದ ಸಂಜೆ 6 ಗಂಟೆಯವರೆಗೆ ಕೂಡಿಹಾಕಿ ದೌರ್ಜನ್ಯ ಎಸಗಿದ್ದಲ್ಲದೆ, "ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕಾಲೇಜಿನಲ್ಲಿ ನಿಮ್ಮನ್ನು ಚಾಕುವಿನಿಂದ ತುಂಡು ತುಂಡಾಗಿ ಕತ್ತರಿಸುತ್ತೇವೆ" ಎಂದು ಜೀವಬೆದರಿಕೆ ಹಾಕಿದ್ದರು. ಅಲ್ಲದೆ, ತರಗತಿಗೆ ಬರುವಾಗ "ಕ್ಲೀನ್ ಶೇವ್ ಮಾಡಿಕೊಂಡು ಬರಬೇಕು, ಶೂ ಹಾಕಬಾರದು" ಎಂದು ನಿಯಮ ಹೇರಿದ್ದರು. ಏತನ್ಮಧ್ಯೆ, ತೀವ್ರ ಹೆದರಿಕೆಯಿಂದ ಸಂತ್ರಸ್ತ ವಿದ್ಯಾರ್ಥಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದು, ಅವರ ಸಲಹೆಯಂತೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಕೊಲೆ ಯತ್ನ, ಅಪಹರಣ ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆಯ ರ‍್ಯಾಗಿಂಗ್ ನಿರೋಧಕ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎಫ್‌ಐಆರ್ ದಾಖಲಾಗಿರುವ ವಿದ್ಯಾರ್ಥಿಗಳು...

ನಾಸೀದ್ ಅಮೀರ್, ಆದಿಲ್ ಎಂ., ಅರ್ಶಕ್, ಅನೀಶ್, ಉವೈಸ್, ರೋಹನ್ ರಮೇಶ್, ಆದಿಲ್ ವಿ.ಪಿ., ರೆಹಾನ್ ಎಂ.ಪಿ. ಮತ್ತು ಶಿನಾಸ್ ಎಂಬ 9 ಮಂದಿ ಸೀನಿಯರ್ಸ್ ವಿರುದ್ಧ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!