ಹೈಕೋರ್ಟ್  
ರಾಜ್ಯ

2023ರ ವಿಧಾನಸಭಾ ಚುನಾವಣೆಯ ವೇಳೆ ಸುಳ್ಳು ಅಫಿಡವಿಟ್: ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡಗೆ ಹೈಕೋರ್ಟ್ ನೋಟಿಸ್

2026ರ ಜುಲೈ 27ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೈಸೂರಿನ ಎಂ.ಡಿ. ಆದಿಶ್ ಸಾಗರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರು ಆದೇಶ ಹೊರಡಿಸಿದರು.

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಶ್ರೀರಂಗಪಟ್ಟಣದ ಶಾಸಕ ಬಿ. ರಮೇಶ ಬಂಡಿಸಿದ್ಧೇಗೌಡ, ಭಾರತೀಯ ಚುನಾವಣಾ ಆಯೋಗ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ವಿಚಾರಣೆ ನಡೆಸುವ ವಿಶೇಷ ಕೋರ್ಟ್ 2026ರ ಜುಲೈ 27ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೈಸೂರಿನ ಎಂ.ಡಿ. ಆದಿಶ್ ಸಾಗರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರು ಆದೇಶ ಹೊರಡಿಸಿದರು.

ಜನತಾ ಪ್ರಾತಿನಿಧ್ಯ ಕಾಯ್ದೆ, 1951'ರ ಸೆಕ್ಷನ್ 125ಎ ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ ಕೇವಲ ಚುನಾವಣಾ ಆಯೋಗ ಮಾತ್ರ ದೂರು ದಾಖಲಿಸಬಹುದು ಎಂಬ ಏಕೈಕ ಕಾರಣಕ್ಕಾಗಿ, ವಿಶೇಷ ನ್ಯಾಯಾಲಯವು ಅರ್ಜಿದಾರರ ಖಾಸಗಿ ದೂರಿಗೆ (ಬಿಎನ್‌ಎಸ್‌ಎಸ್‌ನ ಸೆಕ್ಷನ್ 223 ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ಎ ಅಡಿಯಲ್ಲಿ ಸಲ್ಲಿಸಲಾದ ದೂರು) ಮಾನ್ಯತೆಯಿಲ್ಲ ಎಂದು ತಿರಸ್ಕರಿಸಿತ್ತು.

ವಿವಾದಿತ ಆದೇಶವು ಸತೀಶ್ ಉಕೇ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ರೂಪಿಸಿದ ಕಾನೂನು ಹಾಗೂ ಚುನಾವಣಾ ಆಯೋಗದ 2014ರ ಸುತ್ತೋಲೆಯ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದರು.

ಬೋಗಾದಿಯಲ್ಲಿ ತಮಗಿದ್ದ ಆಸ್ತಿಗಳ ವಿವರವನ್ನು ಕೈಬಿಡುವ ಮೂಲಕ ಸೆಕ್ಷನ್ 125ಎ ಅಡಿಯಲ್ಲಿ ಸುಳ್ಳು ಮತ್ತು ಅಪೂರ್ಣ ಅಫಿಡವಿಟ್ ಸಲ್ಲಿಸಿದ ಶಾಸಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ವಾದಿಸಿದರು.

ಅರ್ಜಿದಾರರು ವಿವರವಾದ ದೂರು ಸಲ್ಲಿಸಿದ ಹೊರತಾಗಿಯೂ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮತ್ತು ಭಾರತೀಯ ಚುನಾವಣಾ ಆಯೋಗವು ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ