ಬಾವಿಯಿಂದ ನೀರು ಸೇದಿ ತರುತ್ತಿರುವ ಮಕ್ಕಳು  
ರಾಜ್ಯ

TNIE ವರದಿ ಫಲಶ್ರುತಿ: ಹೊಡಿಕೆ ಶಿರೂರು ಸರ್ಕಾರಿ ಶಾಲೆಯಲ್ಲಿ ಮಕ್ಕಳ ದುಸ್ಥಿತಿ; ಉಪ ಲೋಕಾಯುಕ್ತರಿಂದ ಕೇಸು ದಾಖಲು

ಹೊಡಿಕೆ ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಬಾವಿಯಿಂದ ನೀರು ಸೇದಿ, ಅದನ್ನು ಶೌಚಾಲಯಗಳಿಗೆ ಕೊಂಡೊಯ್ಯುವಂತೆ ಹಾಗೂ ಕುಡಿಯಲು ನೀರು ತರುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲತಾ ನಾಯಕ್, ಹೊನ್ನಾವರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಭೀಮಪ್ಪ ಭಜಂತ್ರಿ ಹಾಗೂ ಹೊಡಿಕೆ ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಶಾನುಭೋಗ್ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊಡಿಕೆ ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಬಾವಿಯಿಂದ ನೀರು ಸೇದಿ, ಅದನ್ನು ಶೌಚಾಲಯಗಳಿಗೆ ಕೊಂಡೊಯ್ಯುವಂತೆ ಹಾಗೂ ಕುಡಿಯಲು ನೀರು ತರುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳ ಆಡಳಿತ ವೈಫಲ್ಯ ಎಂದು ಪರಿಗಣಿಸಿರುವ ನ್ಯಾಯಮೂರ್ತಿ ಫಣೀಂದ್ರ, ಶಾಲೆಯ ಮಕ್ಕಳು 100 ಅಡಿ ಆಳದ ಬಾವಿಯಿಂದ ನೀರು ತರುವಂತೆ ಮಾಡಲಾಗುತ್ತಿದೆ; ಶಾಲೆಯಲ್ಲಿ ಸ್ವಚ್ಛತೆ ಮತ್ತು ಸುರಕ್ಷತಾ ಸಮಸ್ಯೆಗಳಿವೆ ಎಂದು ಪೋಷಕರು ಆಕ್ಷೇಪಿಸಿದ್ದಾರೆ ಎಂಬ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ಪ್ರಕಟಿಸಿದ್ದ ವರದಿಯನ್ನು ಆಧಾರವಾಗಿಸಿಕೊಂಡು ಸ್ವಯಂಪ್ರೇರಿತ (ಸುಮೋಟೊ) ವಿಚಾರಣೆ ಆರಂಭಿಸಿದ್ದಾರೆ.

ಶಾಲಾ ಕಟ್ಟಡದ ದುಸ್ಥಿತಿ, ಮೂಲಸೌಕರ್ಯಗಳ ಕೊರತೆ ಹಾಗೂ ಶಿಕ್ಷಕರ ಕೊರತೆಯಿಂದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿರುವ TNIE ವರದಿಯನ್ನು ಉಲ್ಲೇಖಿಸಿರುವ ಉಪ ಲೋಕಾಯುಕ್ತರು, ಶಿಕ್ಷಣದ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಖಾತರಿಪಡಿಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳು, ಕುಡಿಯುವ ನೀರು, ಸ್ವಚ್ಛತೆ ಮತ್ತು ನೈರ್ಮಲ್ಯ ಹಾಗೂ ಸುರಕ್ಷತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ. ಆದರೆ, TNIE ವರದಿಯಲ್ಲಿ ವಿದ್ಯಾರ್ಥಿಗಳಿಗೆ ಇವುಗಳನ್ನು ಖಾತರಿಪಡಿಸಲಾಗಿಲ್ಲ ಎಂಬುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ಇದು ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿಷ್ಕ್ರಿಯತೆಯನ್ನು ತೋರಿಸುತ್ತದೆ. ಅಲ್ಲದೆ ಸಂವಿಧಾನದ 21 ಮತ್ತು 21ಎ ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಪ ಲೋಕಾಯುಕ್ತರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ತಮ್ಮ ಅಧಿಕಾರವನ್ನು ಚಲಾಯಿಸಿ, ಆಡಳಿತ ವೈಫಲ್ಯವನ್ನು ಪರಿಹರಿಸುವ ಉದ್ದೇಶದಿಂದ ಸ್ವಯಂಪ್ರೇರಿತ ವಿಚಾರಣೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾಲ್ಕು ವಾರಗಳೊಳಗೆ ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ. ಆದೇಶದ ಪ್ರತಿಯನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಿಗೆ ಕಳುಹಿಸಲಾಗಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ