ಫ್ರೀಡಂ ಪಾರ್ಕ್‌ನಲ್ಲಿ ಸಿಇಸಿ ವಿರುದ್ಧ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದರು. 
ರಾಜ್ಯ

CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ರಕ್ಷಿಸುವುದು ಹಾಗೂ ಮತ ಚಲಾಯಿಸುವ ನಾಗರಿಕರ ಸಾಂವಿಧಾನಿಕ ಹಕ್ಕನ್ನು ಕಾಪಾಡುವುದು ಈ ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶನಿವಾರ ಇಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್‌ರನ್ನು ವಜಾಗೊಳಿಸಬೇಕು ಹಾಗೂ ಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ 'ಫ್ರೀಡಂ ಪಾರ್ಕ್'ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ಆಯೋಗವು ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ಚುನಾವಣೆಗಳನ್ನು ನಡೆಸುವ ಸಾಂವಿಧಾನಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸಬೇಕಿದೆ. ಅದು ಕೇಂದ್ರ ಸರ್ಕಾರದ ಇಚ್ಛೆಯಂತೆ ಕಾರ್ಯನಿರ್ವಹಿಸುವ ಬದಲು ಸಂವಿಧಾನಕ್ಕೆ ಬದ್ಧವಾಗಿರಬೇಕು ಎಂದರು.

ಚುನಾವಣಾ ಆಯೋಗದ ಸದಸ್ಯರು ಸಾಂವಿಧಾನಿಕ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿರುವುದು ಕಂಡುಬಂದರೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು. ಅಲ್ಲದೆ, ನಿಯಮ ಉಲ್ಲಂಘನೆ ಸಾಬೀತಾದರೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದೂ ಅವರು ಆಗ್ರಹಿಸಿದರು.

ಕಳೆದ 10 ತಿಂಗಳುಗಳಲ್ಲಿ ಚುನಾವಣಾ ಆಯೋಗದ ಹಲವು ನಿರ್ಧಾರಗಳ ಬಗ್ಗೆ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು ಎಂಬ ವರದಿಗಳನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದರು.

ಈ ಬೆಳವಣಿಗೆಗಳು ಚುನಾವಣಾ ಆಯೋಗದ ಸ್ವಾತಂತ್ರ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಈ ಆರೋಪಗಳು ಸಾಬೀತಾದರೆ ಮುಖ್ಯ ಚುನಾವಣಾ ಆಯುಕ್ತರು (CEC) ತಮ್ಮ ಹುದ್ದೆಯಲ್ಲಿ ಮುಂದುವರಿಯಬಾರದು. ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆ ಅಗತ್ಯವಿದೆ ಎಂದು ಆಗ್ರಹಿಸಿದರು.

ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ರಕ್ಷಿಸುವುದು ಹಾಗೂ ಮತ ಚಲಾಯಿಸುವ ನಾಗರಿಕರ ಸಾಂವಿಧಾನಿಕ ಹಕ್ಕನ್ನು ಕಾಪಾಡುವುದು ಈ ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಲ್ಲದೆ, ಸೋಮವಾರದಿಂದ ಜಿಲ್ಲಾ ಕೇಂದ್ರಗಳಿಗೂ ಈ ಪ್ರತಿಭಟನೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಮಾತನಾಡಿದರು. ಯುವ ಘಟಕದ ಕಾರ್ಯಕರ್ತರು ಸೇರಿದಂತೆ ಕಾಂಗ್ರೆಸ್ ಪಕ್ಷದ ಅಪಾರ ಸಂಖ್ಯೆಯ ಕಾರ್ಯಕರ್ತರು ಇದರಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್; ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು, ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ

ವಿನೋದ್‌ ಕಾಂಬ್ಳಿ ಈಗ ಏಕಾಂಗಿ; ವೃದ್ದಾಶ್ರಮದಿಂದಲೇ ವಿಡಿಯೋ ಹಂಚಿಕೊಂಡ ಮಾಜಿ ಕ್ರಿಕೆಟಿಗ; ಅಭಿಮಾನಿಗಳಿಗೆ ಆತಂಕ!

ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ,ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

'ಪದ್ಮಭೂಷಣ ಸಣ್ಣ ವಿಷಯ, ಅವರನ್ನು ಪ್ರಧಾನಿಯನ್ನಾಗಿ ಮಾಡಿ': ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ ಹೇಳಿಕೆಗೆ ಕಾಂಗ್ರೆಸ್ ಲೇವಡಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ: ಬಿಜೆಪಿ ಶಾಸಕ ಮುನಿರತ್ನರ ಕತ್ತಿನ ಪಟ್ಟಿ ಹಿಡಿದು, ಯುವಕನ ತರಾಟೆ! Video ವೈರಲ್