ಉಗ್ರರು Online Desk
ರಾಜ್ಯ

ಬಂಧಿತ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಕರ್ನಾಟಕದ ಮೂವರು ಬಿಜೆಪಿ ನಾಯಕರು? ಟಾರ್ಗೆಟ್ ಪಟ್ಟಿಯಲ್ಲಿ ಆ ನಾಯಕರ್ಯಾರು?

ಕರ್ನಾಟಕದ ಮೂವರು ಪ್ರಮುಖ ಬಿಜೆಪಿ ನಾಯಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಚಿಕ್ಕಬಳ್ಳಾಪುರ ಹಾಗೂ ಹಾಸನದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ:

ಚಿಕ್ಕಬಳ್ಳಾಪುರ: ಕರ್ನಾಟಕದ ಮೂವರು ಪ್ರಮುಖ ಬಿಜೆಪಿ ನಾಯಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಚಿಕ್ಕಬಳ್ಳಾಪುರ ಹಾಗೂ ಹಾಸನದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಶಬ್ಬೀರ್ ಹಾಗೂ ಹಾಸನದಲ್ಲಿದ್ದ ಬಿಹಾರ ಮೂಲದ ಸಲ್ಮಾನ್ ಎಂದು ಗುರುತಿಸಲಾಗಿದ್ದು, ಅವರ ಹಿಟ್‌ಲಿಸ್ಟ್‌ನಲ್ಲಿ (ಟಾರ್ಗೆಟ್ ಪಟ್ಟಿಯಲ್ಲಿ) ಇದ್ದ ಪ್ರಮುಖ ನಾಯಕರ ಬಗ್ಗೆ ಇಲ್ಲಿದೆ ಮಾಹಿತಿ:

ಪ್ರಕರಣದ ಹಿನ್ನೆಲೆ ಏನು?

ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿಯಾದ ಶಬ್ಬೀರ್ ಎಂಬ ಶಂಕಿತ ಆರೋಪಿಯನ್ನು ನಗರ ಪೊಲೀಸರು ಬಿಎನ್‌ಎಸ್ 113ರ ಅಡಿ (ಭಯೋತ್ಪಾದನಾ ಕೃತ್ಯದ ಸಂಚು) ಬಂಧಿಸಿದ್ದಾರೆ. ಈತ ಟೆಲಿಗ್ರಾಮ್ ಗ್ರೂಪ್‌ಗಳನ್ನು ಸೃಷ್ಟಿಸಿಕೊಂಡು, ಅಲ್ಲಿ ಈ ಮೂವರು ಹಿಂದೂಪರ ಧ್ವನಿಯುಳ್ಳ ಪ್ರಮುಖ ಬಿಜೆಪಿ ನಾಯಕರನ್ನು ಹತ್ಯೆ ಮಾಡುವ ಕುರಿತು ಮತ್ತು ಜಿಲ್ಲೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಬಗ್ಗೆ ಸಂಭಾಷಣೆ ನಡೆಸಿದ್ದ ಎನ್ನಲಾಗಿದೆ. ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆ ಹಾಗೂ ಭದ್ರತೆಗೆ ಒತ್ತಾಯಿಸಿದ್ದಾರೆ.

ಹಾಗಾದ್ರೆ, ಟಾರ್ಗೆಟ್‌ನಲ್ಲಿದ್ದ ನಾಯಕರ್ಯಾರು?

ಶಂಕಿತ ಆರೋಪಿಗಳು ಟೆಲಿಗ್ರಾಂ ಗ್ರೂಪ್‌ ಮೂಲಕ ಸಂವಹನ ನಡೆಸುತ್ತಿದ್ದು, ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ.ಟಿ. ರವಿ ಮತ್ತು ಪ್ರತಾಪ್ ಸಿಂಹ ಅವರನ್ನು ಹತ್ಯೆ ಮಾಡಲು ಸ್ಕೆಚ್ ಹಾಕಿದ್ದರು ಎನ್ನಲಾಗಿದೆ. ಇದರೊಂದಿಗೆ, ದೇಶದಲ್ಲಿ ಅರಾಜಕತೆ ಸೃಷ್ಟಿಸುವುದು, ವಿಧ್ವಂಸಕ ಕೃತ್ಯಗಳನ್ನು ನಡೆಸುವುದು ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ ಸಂಗ್ರಹಿಸಲು ಶ್ರೀಮಂತರನ್ನು ಅಪಹರಿಸುವ ಕುರಿತು ಈ ಟೆಲಿಗ್ರಾಂ ಗುಂಪಿನಲ್ಲಿ ಪ್ರತಿದಿನ ಚರ್ಚೆ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ರಾಷ್ಟ್ರೀಯ ನಾಯಕರ ಹತ್ಯೆಗೂ ಸಂಚು?

ವರದಿಗಳ ಪ್ರಕಾರ, ಕೇವಲ ಕರ್ನಾಟಕದ ಪ್ರಮುಖ ಹಿಂದೂ ನಾಯಕರಷ್ಟೇ ಅಲ್ಲದೆ, ದೇಶದ ಪ್ರಮುಖ ಗಣ್ಯರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸುವ ಬಗ್ಗೆಯೂ ಈ ಗ್ರೂಪ್‌ನಲ್ಲಿ ಚರ್ಚೆಗಳು ನಡೆದಿದ್ದವು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪ್ರಸ್ತುತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಸದ್ಯದಲ್ಲೇ ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಸಾಧ್ಯತೆಯೂ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾಪ: ಡೊನಾಲ್ಡ್ ಟ್ರಂಪ್ ತಿರಸ್ಕೃತ

Nepal flood: ಇನ್ನೂ ಪತ್ತೆಯಾಗದ ತಮಿಳು ನಾಡಿನ 85 ಯಾತ್ರಿಕರು; ಕುಟುಂಬಸ್ಥರ ಅರಣ್ಯರೋಧನ

ಮಥುರಾ: ಪ್ರೇಮಾನಂದ ಮಹಾರಾಜರ ಶಿಷ್ಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!

ಪ್ರತಿಭಟನೆ ವೇಳೆ ಪ್ರಜ್ಞೆ ಕಳೆದುಕೊಂಡ ಮಹಿಳೆ: ಸಚಿವ ಹೆಚ್.ಸಿ. ಬಾಲಕೃಷ್ಣ ಪೊಲೀಸರನ್ನು ಛೂಬಿಟ್ರಾ? ಜೆಡಿಎಸ್ ಆರೋಪ Video

ಭಜನಾ ಕಾರ್ಯಕ್ರಮ: 'ಹನುಮಾನ್ ಅಂಶ್'ನ 'ಪಾರ್ವತಿ' ಹಾಡಿಗೆ ದನಿಗೂಡಿಸಿ, ಕಂಜೀರಾ ನುಡಿಸಿದ ಪ್ರಧಾನಿ ಮೋದಿ! Video