ನಟ ದರ್ಶನ್ 
ರಾಜ್ಯ

ಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಮತ್ತೆ ಶಾಕ್: ಪ್ರದೋಷ್ ಹೇಳಿಕೆ ಮುಂದೂಡಿಕೆ ಅರ್ಜಿ ತಿರಸ್ಕೃತ, ಸೆ.28ರಂದೇ ಹೇಳಿಕೆ ದಾಖಲು..!

ದರ್ಶನ್ ಪರ ಹಿರಿಯ ವಕೀಲ ಹಶ್ಮತ್ ಪಾಷಾ ವಾದ ಮಂಡಿಸಿ, ಹೈಕೋರ್ಟ್ ಆದೇಶದ ಪ್ರಮಾಣೀಕೃತ ಪ್ರತಿ ತಡವಾಗಿ ದೊರೆತಿದ್ದು, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕನಿಷ್ಠ 10 ದಿನಗಳ ಕಾಲಾವಕಾಶ ಅಗತ್ಯವಿದೆ.

ಬೆಂಗಳೂರು: ರೆಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ approver ಆಗಿರುವ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಒಂದು ವಾರ ಮುಂದೂಡಬೇಕು ಎಂದು ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಪ್ರದೋಷ್ ಅವರ ಹೇಳಿಕೆಯನ್ನು ನಿಗದಿಯಂತೆ ಸೆಪ್ಟೆಂಬರ್ 28ರ ಸೋಮವಾರ ದಾಖಲಿಸಲಾಗುತ್ತದೆ.

ಇತ್ತೀಚೆಗೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಮಯ ಬೇಕಿದೆ ಎಂದು ದರ್ಶನ್ ಪರ ವಕೀಲರು ಹೇಳಿ, ಹೇಳಿಕೆ ದಾಖಲಿಸುವುದನ್ನು ಮುಂದೂಡುವಂತೆ ಮನವಿ ಮಾಡಿದ್ದರು.

ದರ್ಶನ್ ಪರ ಹಿರಿಯ ವಕೀಲ ಹಶ್ಮತ್ ಪಾಷಾ ವಾದ ಮಂಡಿಸಿ, ಹೈಕೋರ್ಟ್ ಆದೇಶದ ಪ್ರಮಾಣೀಕೃತ ಪ್ರತಿ ತಡವಾಗಿ ದೊರೆತಿದ್ದು, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕನಿಷ್ಠ 10 ದಿನಗಳ ಕಾಲಾವಕಾಶ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್, ಹೈಕೋರ್ಟ್ ಆದೇಶವನ್ನು ತೀರ್ಪು ಪ್ರಕಟವಾದ ದಿನವೇ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ತಿಳಿಸಿತು.

ಇತರ ಸಾಕ್ಷಿಗಳ ವಿಚಾರಣೆ ಮುಂದುವರಿಸಿ, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಪ್ರದೋಷ್ ಅವರ ಹೇಳಿಕೆಯನ್ನು ಮಾತ್ರ ಬಾಕಿ ಇರಿಸಬೇಕು ಎಂದು ಪಾಷಾ ವಾದಿಸಿದರು.

ಆದರೆ, ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಸಚಿನ್ ಅವರು ಈ ಮನವಿಯನ್ನು ವಿರೋಧಿಸಿದರು. ಹೈಕೋರ್ಟ್‌ನಲ್ಲಿ ನಡೆದ ಸುದೀರ್ಘ ವಿಚಾರಣೆಯ ಬಳಿಕ ಸೆಪ್ಟೆಂಬರ್ 24ರಂದು ಪ್ರದೋಷ್ ಅವರಿಗೆ ಅಧಿಕೃತ ಸಮನ್ಸ್ ಜಾರಿಗೊಳಿಸಲಾಗಿದೆ.

ದರ್ಶನ್ ಪರ ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಹೊಸ ಆಧಾರಗಳಿಲ್ಲ ಎಂದು ವಾದಿಸಿದ ಪ್ರಾಸಿಕ್ಯೂಷನ್, ಅರ್ಜಿಯನ್ನು ತಿರಸ್ಕರಿಸುವಂತೆ ನ್ಯಾಯಾಲಯವನ್ನು ಕೋರಿತು. ಪ್ರಾಸಿಕ್ಯೂಷನ್‌ನ ಆಕ್ಷೇಪವನ್ನು ಪುರಸ್ಕರಿಸಿದ ನ್ಯಾಯಾಲಯ, ದರ್ಶನ್ ಪರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ಪವಿತ್ರಾ ಗೌಡ ಜಾಮೀನು ಅರ್ಜಿ ತಿರಸ್ಕೃತ

ಇದೇ ನ್ಯಾಯಾಲಯವು ರೆಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎ1 ಪವಿತ್ರಾ ಗೌಡ ಸಲ್ಲಿಸಿದ್ದ ನಿಯಮಿತ ಜಾಮೀನು ಅರ್ಜಿಯನ್ನೂ ತಿರಸ್ಕರಿಸಿದೆ.

ನಟ ದರ್ಶನ್ ಹಾಗೂ ಇತರರು ಭಾಗಿಯಾಗಿದ್ದಾರೆ ಎನ್ನಲಾದ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ, ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ನಿಯಮಿತ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇನ್ನು ನಿಮ್ಮ ಆಟ ನಡೆಯಲ್ಲ, ಉಗ್ರವಾದ ನಿಲ್ಲಿಸಿ-ಬುದ್ಧಿ ಕಲಿಯಿರಿ: ಸುಳ್ಳು ಹೇಳಿದ ‘ಸರಣಿ ಭಯೋತ್ಪಾದಕ’ Pakಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು..!

ಮತ್ತಷ್ಟು ಜಾಗತಿಕ ಬೆಂಬಲ; ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸ್ಥಾನ ಕುರಿತು ಭಾರತದ ಬೆನ್ನಿಗೆ ನಿಂತ ಪೋರ್ಚುಗಲ್, ಮಾರಿಷಸ್!

ಇಸ್ರೇಲ್ ಮೇಲಿನ ಅಕ್ಟೋಬರ್ 7ರ ದಾಳಿ 16 ಬಾರಿ ಸಂಭವಿಸಿದ 9/11ರ ದಾಳಿಗೆ ಸಮಾನ- ನೆತನ್ಯಾಹು

'ಬಂಡಾಯ ಇಲ್ಲ, ಸರ್ವಾನುಮತದ ಅನುಮೋದನೆ’: SIR ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ!

ಗೋವಾದಲ್ಲಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ; ನಟ ವಿಶಾಲ್ ಗೆ ಗಾಯ! Video