ಗವಿಮಠದ ಮಹಾಸಂಸ್ಥಾನದ ಶ್ರೀಗಳಾದ ಶ್ರೀ 
ರಾಜ್ಯ

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ; ವದಂತಿಗಳ ನಿರಾಕರಿಸಿದ ಗವಿಸಿದ್ಧೇಶ್ವರ ಸ್ವಾಮೀಜಿ

ಕಳೆದ ಒಂದು ವಾರದಿಂದ ಮೌನ ವ್ರತದಲ್ಲಿದ್ದ ಸ್ವಾಮೀಜಿಯವರು ಶನಿವಾರ ಮಧ್ಯಾಹ್ನ ಮೌನ ವ್ರತ ಅಂತ್ಯಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವಾಮೀಜಿಯವರ ವಿರೋಧಿಗಳು ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಇಂತಹ ವದಂತಿಗಳನ್ನು ಹರಡುತ್ತಿದ್ದಾರೆ.

ಮೈಸೂರು/ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ರ ಉದ್ಘಾಟನಾ ಆಹ್ವಾನವನ್ನು ಕೊಪ್ಪಳದ ಗವಿಮಠದ ಮಹಾಸಂಸ್ಥಾನದ ಶ್ರೀಗಳಾದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ತಿರಸ್ಕರಿಸಿದ್ದಾರೆ ಎಂಬ ವದಂತಿಗಳನ್ನು ಗವಿಮಠದ ಮೂಲಗಳು ಅಧಿಕೃತವಾಗಿ ತಳ್ಳಿಹಾಕಿವೆ.

ಶ್ರೀಗಳು ದಸರಾ ಉದ್ಘಾಟನೆಯ ಆಹ್ವಾನವನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದಾರೆ ಎಂದು ಮಠ ಸ್ಪಷ್ಟಪಡಿಸಿದೆ.

ಕಳೆದ ಒಂದು ವಾರದಿಂದ ಮೌನ ವ್ರತದಲ್ಲಿದ್ದ ಸ್ವಾಮೀಜಿಯವರು ಶನಿವಾರ ಮಧ್ಯಾಹ್ನ ಮೌನ ವ್ರತ ಅಂತ್ಯಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವಾಮೀಜಿಯವರ ವಿರೋಧಿಗಳು ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಇಂತಹ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಮಠ ತಿಳಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರು ದಸರಾ ಉತ್ಸವ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರನ್ನು ಆಹ್ವಾನಿಸಿದ್ದು, ಸ್ವಾಮೀಜಿಯವರು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಿಮಠದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಈ ಹಿಂದೆ ಹಲವು ಗಣ್ಯರು ಆಗಮಿಸಿದ್ದರು ಎಂದು ತಿಳಿಸಿದೆ.

ಗವಿಶ್ರೀ ಅವರು ದಸರಾ ಉತ್ಸವ ಉದ್ಘಾಟಿಸುವುದು ಹೆಮ್ಮೆಯ ವಿಷಯವಾಗಿದೆ. ದಸರಾ ಉದ್ಘಾಟನೆಗೆ ನೀಡಿರುವ ಆಹ್ವಾನವನ್ನು ತಿರಸ್ಕರಿಸಿರುವ ಕುರಿತು ಗವಿಮಠವಾಗಲಿ ಅಥವಾ ಗವಿಶ್ರೀಯವರಾಗಲಿ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ಅಥವಾ ಪ್ರಕಟಣೆ ನೀಡಿಲ್ಲ ಎಂದು ಮಠ ಸ್ಪಷ್ಟಪಡಿಸಿದೆ. ಅನಗತ್ಯ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ಮಾತುಗಳಿಗೆ ಜನರು ಕಿವಿಗೊಡಬಾರದು ಎಂದು ಮನವಿ ಮಾಡಿದೆ.

ಇದೇ ವೇಳೆ, ಜಿಲ್ಲಾ ಉಳಿಸಿ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ಸಮಿತಿಯ ಸಂಚಾಲಕರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.

ಬಾಲ್ಡೋಟಾ ಸೇರಿದಂತೆ ವಿವಿಧ ಕೈಗಾರಿಕೆಗಳ ವಿಸ್ತರಣೆಗೆ ಹಾಗೂ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ಸಂಘರ್ಷ: ಮಧ್ಯಾವಧಿ ಚುನಾವಣೆಗೂ ಮುನ್ನ ಇರಾನ್ ಮೇಲೆ ಅಮೆರಿಕ ದಾಳಿ?: ಟ್ರಂಪ್ ಸ್ಫೋಟಕ ಹೇಳಿಕೆ..!

ಗ್ರಾಹಕರಿಗೆ ಗುಡ್‌ನ್ಯೂಸ್: ಪ್ರಸ್ತಾವಿತ ಬ್ಯಾಂಕ್ ಮುಷ್ಕರ ಮುಂದೂಡಿಕೆ, IBA- UFBU ಮಾತುಕತೆ ಬಳಿಕ ಮಹತ್ವದ ನಿರ್ಧಾರ

BDA 100ನೇ 'ಓಪನ್ ಹೌಸ್' ಸಭೆ: ನಿವಾಸಿಗಳಿಂದ ಉತ್ತಮ ಪ್ರತಿಕ್ರಿಯೆ!

LPU ಕ್ಯಾಂಪಸ್‌ನಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ವಾಹನಗಳಿಗೆ ಬೆಂಕಿ, ಪೊಲೀಸರಿಗೆ ಗಾಯ, ತನಿಖೆಗೆ SIT ರಚನೆ!

ಅಕ್ಟೋಬರ್ 7 ರ ದಾಳಿಯ ಮೊದಲು ಹಮಾಸ್‌ ಎಚ್ಚರಿಕೆ ನೀಡಿತ್ತು: ಇಸ್ರೇಲ್‌ನ ಮಾಜಿ ರಕ್ಷಣಾ ಸಚಿವ ಸ್ಫೋಟಕ ಮಾಹಿತಿ