ಯತೀಂದ್ರ ಸಿದ್ದರಾಮಯ್ಯ 
ರಾಜ್ಯ

'ಸಾಮಾನು ಬೇಗ ಕೈಗೆ ಸಿಗಲಿಲ್ಲ ಅದಕ್ಕೆ ಲೇಟ್ ಆಯಿತು': ತಡವಾಗಿ ಬಂದಿದ್ದಕ್ಕೆ ಸಚಿವ ಯತೀಂದ್ರ ಸ್ಪಷ್ಟನೆ! Video

ಯತೀಂದ್ರ ತಡವಾಗಿ ಬಂದಿದ್ದಕ್ಕೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು, ಸಮಯ ಪ್ರಜ್ಞೆ ಇಲ್ವೇನ್ರೀ? ಎಂದು ಸಚಿವರನ್ನೇ ಪ್ರಶ್ನಿಸಿದ್ದಾರೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ದಸರಾ ಗಜಪಡೆ ಮಾವುತರು, ಕಾವಾಡಿಗಳಿಗೆ ಉಪಾಹಾರ ಮತ್ತು ಕಿಟ್​​ ವಿತರಣೆ ಕಾರ್ಯಕ್ರಮಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ತಡವಾಗಿ ಬಂದ ಘಟನೆ ಸೋಮವಾರ ನಡೆದಿದೆ.

ಯತೀಂದ್ರ ತಡವಾಗಿ ಬಂದಿದ್ದಕ್ಕೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು, ಸಮಯ ಪ್ರಜ್ಞೆ ಇಲ್ವೇನ್ರೀ? ಎಂದು ಸಚಿವರನ್ನೇ ಪ್ರಶ್ನಿಸಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಉಪಹಾರ ಕಾರ್ಯಕ್ರಮಕ್ಕೆ ಯತೀಂದ್ರ ಸಿದ್ದರಾಮಯ್ಯ ಒಂದು ತಾಸು ತಡವಾಗಿ, ಅಂದರೆ 10 ಗಂಟೆಗೆ ಆಗಮಿಸಿದರು. ಇದರಿಂದ ಮಾವುತರು ಮತ್ತು ಕಾವಾಡಿಗರು ಒಂದು ಗಂಟೆ ಕಾಲ ಕಾಯುವಂತಾಯಿತು.

ಬೆಳಗ್ಗೆಯಿಂದ ಕಾಯುತ್ತಿದ್ದ ಮಾವುತರಿಗೆ ಗೌರವ ನೀಡಬೇಕು, ಸಮಯಕ್ಕೆ ಸರಿಯಾಗಿ ಉಪಹಾರ ನೀಡಬೇಕು, ಅವರನ್ನು ಊಟಕ್ಕಾಗಿ ಕಾಯಿಸುವುದು ಸರಿಯಲ್ಲ ಎಂದು ಶಾಸಕ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿ, ಕೂಡಲೇ ಅಧಿಕಾರಿಗಳಿಗೆ ಕಾರ್ಯಕ್ರಮ ಆರಂಭಿಸುವಂತೆ ಸೂಚಿಸಿದರು. ಆದರೆ ಅಧಿಕಾರಿಗಳು ಸಹ ಕಾರ್ಯಕ್ರಮವನ್ನು ಆರಂಭಿಸಲು ವಿಳಂಬ ಮಾಡಿದ್ದಕ್ಕೆ ಮತ್ತಷ್ಟು ಸಿಡಿಮಿಡಿಗೊಂಡು ಸ್ಥಳದಿಂದ ಹೊರನಡೆದರು.

ಇನ್ನು ತಾವು ತಡವಾಗಿ ಬಂದಿದ್ದಕ್ಕೆ ಸಮಜಾಯಿಷಿ ನೀಡಿದ ಸಚಿವ ಯತೀಂದ್ರ ಅವರು, ನಮ್ಮದು ಹೊಸ ಮನೆ, ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು. ಸಾಮಾನು ಯಾವುದೂ ಬೇಗ ಕೈಗೆ ಸಿಗಲಿಲ್ಲ ಅದಕ್ಕೆ ಸ್ವಲ್ಪ ಲೇಟ್ ಆಯಿತು. ಮನೆಯಲ್ಲಿ ಅಮ್ಮ ಇರಲಿಲ್ಲ, ಕೆಲಸಗಾರರೂ ಇರಲಿಲ್ಲ. ಹೀಗಾಗಿ ಕೆಲವೊಂದಿಷ್ಟು ವ್ಯವಸ್ಥೆ ಮಾಡಿ ಬರುವುದರಲ್ಲಿ ತಡವಾಯಿತು. ಉದ್ದೇಶಪೂರ್ವಕವಾಗಿ ತಡಮಾಡಿ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಬೆಂಗಳೂರಿಗೆ 6 ಹೊಸ ಪೊಲೀಸ್‌ ಆಯುಕ್ತರ ನೇಮಕ, ಯಾರು ಹೊಸ ಕಮಿಷನರ್?

ರಾಮಾಯಣ 2 ಬಗ್ಗೆ ಬಿಗ್ ಅಪ್‌ಡೇಟ್: ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ಅಬ್ಬರ; ವಾನರ ಸೇನೆಯ 'ಅದ್ಭುತ ದೃಶ್ಯಗಳು'!

ICICI ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್!

'ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಿ ಸೌಲಭ್ಯ ಬೇಡ': ಸ್ವಂತ ಖರ್ಚಿನಲ್ಲೇ ಭಾಗವಹಿಸುವುದಾಗಿ ಶಾಸಕ ಶರಣಗೌಡ ಕಂದಕೂರು ಪತ್ರ

ಬಿಗ್ ಟ್ವಿಸ್ಟ್ ಕೊಟ್ಟ Akvan ಚಂಡಮಾರುತ: ದಿಕ್ಕು ಬದಲಾವಣೆ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಸಾಧ್ಯತೆ