ಯುವ ಸಂಭ್ರಮ AI Image
ರಾಜ್ಯ

ದಸರಾ ಮುನ್ನುಡಿ: ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ; ಮಾನಸಗಂಗೋತ್ರಿಯಲ್ಲಿ 8 ದಿನಗಳ ಕಾಲ ಯುವ ಕಲರವ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ 'ಯುವ ಸಂಭ್ರಮಕ್ಕೆ ಇಂದು ಸಂಜೆ, ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ 'ಯುವ ಸಂಭ್ರಮ-2026' ಸಾಂಸ್ಕೃತಿಕ ಹಬ್ಬಕ್ಕೆ ಇಂದು ಸಂಜೆ ಭರ್ಜರಿ ಚಾಲನೆ ದೊರೆಯಲಿದೆ. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಜೆ 4:30ಕ್ಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಒಟ್ಟು 8 ದಿನಗಳ ಕಾಲ ಈ ಸಾಂಸ್ಕೃತಿಕ ವೈಭವ

ಇಂದು ಸಂಜೆ 4.30ಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ಭವ್ಯ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟಿ ಸಪ್ತಮಿ ಗೌಡ ಮತ್ತು ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯಪ್ರಕಾಶ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಯುವಪಡೆಯ ಉತ್ಸಾಹವನ್ನು ಹೆಚ್ಚಿಸಲಿದ್ದಾರೆ. ಅದರಂತೆ, ಇಂದಿನಿಂದ ಒಟ್ಟು 8 ದಿನಗಳ ಕಾಲ ಪ್ರತಿದಿನ ಸಂಜೆ 4:30 ಗಂಟೆಯಿಂದ ರಾತ್ರಿ 10.30 ರವರೆಗೆ, ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 350 ಕ್ಕೂ ಹೆಚ್ಚು ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಈ ವೇದಿಕೆಯಲ್ಲಿ ವೈವಿಧ್ಯಮಯ ನೃತ್ಯ ಮತ್ತು ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ.

ಯುವ ದಸರಾ ವೇದಿಕೆಗೆ ಆಯ್ಕೆ

ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ನಡೆಯುವ ಯುವ ಸಂಭ್ರಮದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಯ್ದ ಕಾಲೇಜು ತಂಡಗಳಿಗೆ, ನವರಾತ್ರಿ ಹಬ್ಬದ ಸಂದರ್ಭದಲ್ಲಿ ಅದ್ಧೂರಿಯಾಗಿ ನಡೆಯಲಿರುವ ಯುವ ದಸರಾ ವೇದಿಕೆಯಲ್ಲೂ ಸಾಂಸ್ಕೃತಿಕ ಪ್ರದರ್ಶನ ನೀಡಲು ಸುವರ್ಣ ಅವಕಾಶ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚಲಿಸುವ ಬಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ನಿರ್ಭಯಾ ಪ್ರಕರಣ ಕಣ್ಣಮುಂದೆ ಬರುತ್ತಿದೆ: ಸ್ವಯಂಪ್ರೇರಿತವಾಗಿ ಕೇಸ್ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್..!

Hormuz ಜಲಸಂಧಿಯಲ್ಲಿ ಅಮೆರಿಕಕ್ಕೆ ಬಿಗ್ ಶಾಕ್: ಯುಎಸ್ ಮಿಲಿಟರಿಯ ಮತ್ತೊಂದು ಅತ್ಯಾಧುನಿಕ ‘Kingfish’ Drone Iran ವಶಕ್ಕೆ..!

'ಕನ್ನಡದ ಮೊದಲ ಪ್ಯಾನ್ ಇಂಡಿಯಾ ಸ್ಟಾರ್' ಕಿಚ್ಚ ಸುದೀಪ್? ಚರ್ಚೆಗೆ ಗ್ರಾಸವಾಯ್ತು ಬಿಗ್ ಬಾಸ್ ಹೇಳಿಕೆ!

ಮಧ್ಯಪ್ರಾಚ್ಯ ಸಂಘರ್ಷ: ಮಧ್ಯಾವಧಿ ಚುನಾವಣೆಗೂ ಮುನ್ನ ಇರಾನ್ ಮೇಲೆ ಅಮೆರಿಕ ದಾಳಿ?: ಟ್ರಂಪ್ ಸ್ಫೋಟಕ ಹೇಳಿಕೆ..!

ಗ್ರಾಹಕರಿಗೆ ಗುಡ್‌ನ್ಯೂಸ್: ಪ್ರಸ್ತಾವಿತ ಬ್ಯಾಂಕ್ ಮುಷ್ಕರ ಮುಂದೂಡಿಕೆ, IBA- UFBU ಮಾತುಕತೆ ಬಳಿಕ ಮಹತ್ವದ ನಿರ್ಧಾರ