ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೇಜಸ್ವಿನಿಗೌಡಗೆ ಟಿಕೆಟ್: 'ಕೈ' ಕಾರ್ಯಕರ್ತರ ಪ್ರತಿಭಟನೆ

ತೇಜಸ್ವಿನಿ ಗೌಡ ಅವರಿಗೆ ಟಿಕೆಟ್ ನೀಡುತ್ತಿರುವುದನ್ನು ವಿರೋಧಿಸಿ ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.

Srinivasa Murthy VN
Updated On : 2 Apr 2013, 3:18 am

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪರವಾಗಿ ತೇಜಸ್ವಿನಿ ಗೌಡ ಅವರಿಗೆ ಟಿಕೆಟ್ ನೀಡುತ್ತಿರುವುದನ್ನು ವಿರೋಧಿಸಿ ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಯಲಸೀಮಾ ಮಾದರಿಯಲ್ಲಿ ಚಂದಾಪುರದಿಂದ ಸುಮಾರು 40 ಟಾಟಾ ಸುಮೊಗಳಲ್ಲಿ ಮೆರವಣಿಗೆ ಮೂಲಕ ಆಗಮಿಸಿರುವ ಕಾರ್ಯಕರ್ತರು ದಕ್ಷಿಣ ಕ್ಷೇತ್ರದಿಂದ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. 'ತೇಜಸ್ವಿನಿಗೌಡ ಅವರು ಸ್ಥಳೀಯರಲ್ಲ. ಅವರ ಮುಖ ಪರಿಚಯವೂ ಸಹ ನಮ್ಮ ಕ್ಷೇತ್ರದ ಜನತೆಗೆ ತಿಳಿದಿಲ್ಲ. ಸ್ಥಳೀಯ ಮಟ್ಟದಲ್ಲಿಯೇ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಿದ್ದಾರೆ. ಮಹಿಳಾ ಮೀಸಲು ಆಧಾರದ ಮೇಲೆ ಟಿಕೆಟ್ ನೀಡುವುದಾದರೆ ಸ್ಥಳೀಯ ನಾಯಕರಾದ ಸುಷ್ಮಾ ರಾಜಗೋಪಾಲ ರೆಡ್ಡಿ ಅವರಿಗೆ ನೀಡಲಿ. ಅಥವಾ ಅವರ ಪತಿ ರಾಜಗೋಪಾಲರೆಡ್ಡಿ ಅವರಿಗೇ ಟಿಕೆಟ್ ನೀಡಬೇಕು' ಎಂದು ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ಆದರೆ ಈ ಪ್ರತಿಭಟನೆಯ ಹಿಂದೆ ಪಕ್ಷದ ಪ್ರಭಾವಿ ನಾಯಕರೊಬ್ಬರ ಕೈವಾಡವಿದೆ. ಅವರೇ ಸ್ವತಃ ಮುಂದೆ ನಿಂತು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತೇಜಸ್ವಿನಿಗೌಡ ಅವರ ಬೆಂಬಲಿಗರು ಆರೋಪ ಮಾಡುತ್ತಿದ್ದಾರೆ.

ಒಟ್ಟಾರೆ ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಬಂಡಾಯದ ಬಿಸಿ ಜೋರಾಗ ತೊಡಗಿದೆ. ಅದರಲ್ಲಿಯೂ ಕಾಂಗ್ರೆಸ್ ಪಕ್ಷದ ಮಟ್ಟಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ. ಪಕ್ಷದ ಪ್ರಭಾವಿ ನಾಯಕರು ತಮ್ಮ ಪ್ರಭಾವವನ್ನು ಬಳಸಿ ತಮ್ಮ ಬೆಂಬಲಿಗರಿಗೇ ಟಿಕೆಟ್ ಕೊಡಿಸುವ ಕಾರ್ಯದಲ್ಲಿ ತೊಡಗಿದ್ದರೆ, ಪ್ರತಿಭಟನೆ ನಡೆಸಿಯಾದರೂ ಸರಿ ತಮ್ಮ ನಾಯಕರಿಗೇ ಟಿಕೆಟ್ ಕೊಡಿಸಬೇಕು ಎಂದು ಕಾರ್ಯಕರ್ತರು ಹವಣಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement