ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಿರಾಣಿ ಪಕ್ಷ ಬಿಡಲ್ಲ: ಪ್ರಹ್ಲಾದ್ ಜೋಶಿ

ಸಚಿವ ಮುರುಗೇಶ್ ನಿರಾಣಿ ಅವರು ಪಕ್ಷ ತೊರೆಯುವುದಿಲ್ಲ, ಅವರು ಬಿಜೆಪಿಯಿಂದಲೇ ಸ್ಪರ್ಧಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್..

Lingaraj Badiger
Updated On : 2 Apr 2013, 12:49 pm

ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ಅವರು ಪಕ್ಷ ತೊರೆಯುವುದಿಲ್ಲ, ಅವರು ಬಿಜೆಪಿಯಿಂದಲೇ ಸ್ಪರ್ಧಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಮಂಗಳವಾರ ಹೇಳಿದ್ದಾರೆ.

ನಿರಾಣಿ ಅವರು ಪಕ್ಷ ತೊರೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕೆಜೆಪಿ ಸೇರುತ್ತಾರೆ ಎಂಬ ಸುದ್ದಿಯನ್ನು ತಳ್ಳಿಹಾಕಿರುವ ಜೋಶಿ, ಇಲ್ಲ ಅವರು ಯಾವುದೇ ಕಾರಣಕ್ಕು ಪಕ್ಷ ಬಿಡಲ್ಲ, ಬಿಜೆಪಿಯಿಂದಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದರು.

ಇದೇ ವೇಳೆ, ಏಪ್ರಿಲ್ 5 ಮತ್ತು 6ರಂದು ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿ, ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಜೋಶಿ ತಿಳಿಸಿದರು.

ನಿರಾಣಿಯವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಸಂಬಂಧ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಅವರನ್ನು ತಮ್ಮ ಹುಬ್ಬಳ್ಳಿಯ ನಿವಾಸಕ್ಕೆ ಕರೆಸಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಸಿಎಂ ನಿವಾಸದಿಂದ ಹೊರಬಂದ ನಿರಾಣಿ, ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement