ಬಾಬ್ರಿ ಧ್ವಂಸ: ಅಡ್ವಾಣಿ ವಿರುದ್ಧ ಮೇಲ್ಮನವಿಗೆ ತಡ ಏಕೆ? ಸುಪ್ರೀಂ ಪ್ರಶ್ನೆ
ಅಲಹಾಬಾದ್ ನ್ಯಾಯಲಯ ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ತಡ ಏಕೆ ಮಾಡುತ್ತಿದ್ದೀರಿ ಎಂದು ಸುಪ್ರೀಂ ಕೋರ್ಟ್...
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ನ್ಯಾಯಲಯ ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ತಡ ಏಕೆ ಮಾಡುತ್ತಿದ್ದೀರಿ ಎಂದು ಸುಪ್ರೀಂ ಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ.
ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಹೆಚ್.ಎಲ್. ದತ್ತು ನೇತೃತ್ವದ ಪೀಠ, ಅಲಹಾಬಾದ್ ನ್ಯಾಯಾಲಯ ಅಡ್ವಾಣಿ ಅವರನ್ನು ಪ್ರಕರಣದಿಂದ ಕೈಬಿಟ್ಟಿರುವ ಬಗ್ಗೆ ಪ್ರಶ್ನಿಸಿದೆ. ಆದರೆ ಈ ಬಗ್ಗೆ ಸರ್ಕಾರ ಮೇಲ್ಮನವಿ ಸಲ್ಲಿಸದಿರುವ ಬಗ್ಗೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಅಂತೆಯೇ ಮೇಲ್ಮನವಿ ತಡವಾಗುವುದರಲ್ಲಿ ಸರ್ಕಾರದ ಸಾಲಿಸಿಟರ್ ಜನರಲ್ ಅವರ ಪಾತ್ರವೂ ಇದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಅಧಿಕಾರಿಗಳು ನ್ಯಾಯಪೀಠದ ಮುಂದೆ ಹಾಜರಾಗಿ ವಿವರ ಸಲ್ಲಿಸಿದರು. ಅಲ್ಲದೆ ಮೇಲ್ಮನವಿ ಸಲ್ಲಿಸಲು 2 ವಾರಗಳ ಕಾಲಾವಕಾಶ ಕೋರಿದರು. 'ಪ್ರಕರಣದ ಸಂಪೂರ್ಣ ವಿವರ ಮತ್ತು ಅಲಹಾಬಾದ್ ನ್ಯಾಯಾಲಯದ ತೀರ್ಪಿನ ವಿವರಗಳನ್ನು ಸಾಲಿಸಿಟರ್ ಜನರಲ್ ಅವರ ಅನುಮೋದನೆಗಾಗಿ ನೀಡಿದ್ದು, ಅವರಿಂದ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಲು ತಮಗೆ 2 ವಾರಗಳ ಕಾಲಾವಕಾಶ ನೀಡಬೇಕು' ಎಂದು ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.
ಸಿಬಿಐ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಮೇಲ್ಮನವಿ ಸಲ್ಲಿಕೆಗೆ 2 ವಾರಗಳ ಕಾಲಾವಕಾಶ ನೀಡಿದೆ.