ರೆಡ್ಡಿ ಬಂಧನ ಅವಧಿ ಏ.15ರವರೆಗೆ ವಿಸ್ತರಣೆ
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಅಲಿಖಾನ್ ಅವರ..
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಅಲಿಖಾನ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 15ರವರೆಗೆ ವಿಸ್ತರಿಸಲಾಗಿದೆ.
ಪರಪ್ಪನ ಅಗ್ರಹಾರದಲ್ಲಿರುವ ರೆಡ್ಡಿ, ಅಲಿಖಾನ್ ಹಾಗೂ ಇತರ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರು ಆರೋಪಿಗಳನ್ನು ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧನ ಅವಧಿಯನ್ನು ವಿಸ್ತರಿಸಿದರು.
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಈ ಆರು ಆರೋಪಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ನಿವೃತ್ತ ಸರ್ಕಾರಿ ಅಧಿಕಾರಿಗಳಾದ ಎಸ್.ಮುತ್ತಯ್ಯ, ಎಸ್.ಪಿ.ರಾಜು ಹಾಗೂ ಸ್ವಸ್ತಿಕ್ ನಾಗರಾಜ್ ಮತ್ತು ಕಾರದಪುಡಿ ಮಹೇಶ್ ಇತರೆ ಆರೋಪಿಗಳಾಗಿದ್ದಾರೆ.