ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮಿ ದೇವಿಗೆ ಜಾಮೀನು

ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮಿ ದೇವಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Srinivasa Murthy VN
Updated On : 2 Apr 2013, 5:27 am

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮಿ ದೇವಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ಏಕ ಸದಸ್ಯ ಪೀಠ, ಜಯಲಕ್ಷ್ಮಿ ಅವರಿಗೆ ಜಾಮೀನು ನೀಡಿದೆ. ಅಲ್ಲದೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ಸಿಂಡಿಕೇಟ್ ಸದಸ್ಯ ಸ್ಥಾನದ ಅಮಾನತು ಶಿಕ್ಷೆಯನ್ನು  ಉಚ್ಛನ್ಯಾಯಾಲಯ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಖಾಸಗೀ ಕಾಲೇಜುಗಳಿಗೆ ಬೆಂಗಳೂರು ವಿವಿ ಮಾನ್ಯತೆ ನೀಡಲು ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮಿ ದೇವಿ ಅವರು ಲಂಚ ಪಡೆಯುತ್ತಿದ್ದಾರೆ ಎಂದು ಲೋಕಾಯುಕ್ತ ಸಂಸ್ಥೆಗೆ ಅನೇಕ ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಜಯಲಕ್ಷ್ಮಿ ದೇವಿ ಅವರು ಜಿಂದಾಲ್ ಶಿಕ್ಷಣ ಸಂಸ್ಥೆಯಿಂದ ಲಂಚ ಪಡೆಯುತ್ತಿದ್ದಾಗ ಬಂಧಿಸಿದ್ದರು.

ಅಲ್ಲದೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಯಲಕ್ಷ್ಮಿ ದೇವಿ ಅವರನ್ನು ಸಿಂಡಿಕೇಟ್ ಸದಸ್ಯ ಸ್ಥಾನದಿಂದ ಅಮಾನತುಗೊಳಿಸಿತ್ತು. ಲೋಕಾಯುಕ್ತ ನ್ಯಾಯಾಲಯದ ಆದೇಶದ ವಿರುದ್ಧ ಜಯಲಕ್ಷ್ಮಿ ದೇವಿ ಪರ ವಕೀಲರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಅಮಾನತು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement