ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿಧಾನಸಭೆ ಚುನಾವಣೆ: 59 ರೌಡಿಗಳ ಬಂಧನ

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ 59 ರೌಡಿಗಳನ್ನು ಬಂಧಿಸಲಾಗಿದೆ.

Srinivasa Murthy VN
Updated On : 3 Apr 2013, 7:08 am

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ 59 ರೌಡಿಗಳನ್ನು ಬಂಧಿಸಲಾಗಿದೆ.

ಡಿಸಿಪಿ ರವಿಕಾಂತೇಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ 12 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಕೇಂದ್ರೀಯ ವಲಯ ಪೊಲೀಸರು, ಮುಂಜಾಗ್ರತಾ ಕ್ರಮವಾಗಿ ವಿವಿಧ ಪ್ರದೇಶಗಳ ಒಟ್ಟು 59 ರೌಡಿಗಳನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ. ಬಂಧಿತ ರೌಡಿಗಳ ಹೆಸರನ್ನು ಬಹಿಂರಗಪಡಿಸಲು ಇಚ್ಛಿಸದ ಅಧಿಕಾರಿಗಳು, ಚುನಾವಣೆ ಮುಗಿಯುವವರೆಗೂ ಅವರನ್ನು ಬಂಧನದಲ್ಲಿರಿಸುವ ಕುರಿತು ಚಿಂತನೆ ನಡೆಸಿದ್ದಾರೆ.

ಸಂಶಯಾಸ್ಪದ ನಡವಳಿಕೆ ಮತ್ತು ಕಾನೂನು ಬಾಹಿರ ಚಟುವಟಿಕೆ ನಡೆಸಿದ ಆರೋಪದ ಮೇರೆಗೆ ರೌಡಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟಾರೆ ದಿನದಿಂದ ದಿನಕ್ಕೆ ಕಾವೇರುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಯಾವುದೇ ಅಡೆ ತಡೆ ಇಲ್ಲದೆ ನೆರವೇರಲು ಪೊಲೀಸ್ ಇಲಾಖೆ ಮತ್ತು ಚುನಾವಣಾ ಆಯೋಗ ಕೈ ಗೊಂಡಿರುವ ಕ್ರಮ ನಿಜಕ್ಕೂ ಶ್ಲಾಘನೀಯ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement