ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ.

Lingaraj Badiger
Updated On : 4 Apr 2013, 1:15 am

ಬಾಗಲಕೋಟೆ: ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ.

ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ಪಕ್ಷದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವುದಾಗಿ ಶೆಟ್ಟರ್ ತಿಳಿಸಿದರು.

ಇದೇ ವೇಳೆ ಕೆಜೆಪಿ ಸೇರಲು ಮುಂದಾಗಿರುವ ಸಚಿವ ಮುರುಗೇಶ್ ನಿರಾಣಿ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರು ಪಕ್ಷ ಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಆದರೆ ಪಕ್ಷ ಬಿಡುವವರು ಬಿಡಬಹುದು. ಬಿಜೆಪಿ ಯಾವುದೇ ಒಬ್ಬ ವ್ಯಕ್ತಿ ಆಧಾರಿತ ಪಕ್ಷ ಅಲ್ಲ ಎಂದರು.

ನಾಳೆ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದ 140ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement