ಬಳ್ಳಾರಿ: ಬೈಕ್ನಲ್ಲಿ ಸಾಗಿಸುತ್ತಿದ್ದ 33 ಲಕ್ಷ ನಗದು ಜಪ್ತಿ
ಬಳ್ಳಾರಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕಾನೂನು ಬಾಹಿರವಾಗಿ ಬೈಕ್ನಲ್ಲಿ ಸಾಗಿಸುತ್ತಿದ್ದ 33 ಲಕ್ಷ ರುಪಾಯಿ ನಗದು ಹಣವನ್ನು ಐಟಿ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.
ಐಟಿ ಅಧಿಕಾರಿ ಹಾಗೂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಹಣ ಸಾಗಿಸುತ್ತಿದ್ದ ಬೈಕ್ ಸವಾರ ಸಿಕ್ಕಿಬಿದ್ದಿದ್ದು, ಹಣವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿ ಸ್ಥಳೀಯ ಉದ್ಯಮಿ ಎಂದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.