ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ
ಮುಂಬೈ: ಉಪನಗರ ಅಂದೇರಿಯ ಮರೋಲ್‌ನಲ್ಲಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ಇಂದು ಮದ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ.
ಅಂದೇರಿಯಲ್ಲಿನ ರಾಜ್ ಪ್ಯಾರಡೈಸ್ ಬಹುಮಹಡಿ ಕಟ್ಟಡದ 10ನೇ ಮಹಡಿಯಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಸ್ಛಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಘಟನಾ ಸ್ಥಳದಲ್ಲಿ ನಾಲ್ಕು ಅಗ್ನಿಶಾಮಕ ವಾಹನ, ಮೂರು ನೀರಿನ ಟ್ಯಾಂಕರ್‌ಗಳು ಹಾಗೂ ಆಂಬ್ಯುಲೇನ್ಸ್‌ಗಳು ಆಗಮಿಸಿದ್ದು, ಅಗ್ನಿ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.