ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿದ್ದು ಶಸ್ತ್ರ ಚಿಕಿತ್ಸೆ ಯಶಸ್ವಿ, ನಾಳೆ ಡಿಸ್ಚಾರ್ಜ್

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯವಾಗಿದ್ದು, ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ..

Lingaraj Badiger
Updated On : 4 Apr 2013, 4:38 am

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯವಾಗಿದ್ದು, ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಗುರುವಾರ ಹೇಳಿದ್ದಾರೆ.

ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸಿದ್ದು ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಸ್ಪತ್ರೆಯ ವೈದ್ಯರಾದ ಡಾ.ರಮೇಶ್ ಹಾಗೂ ಡಾ.ರವಿಕುಮಾರ್ ಅವರು, ಪಿತ್ತಕೋಶದಲ್ಲಿ ಕಲ್ಲು ಹಾಗೂ ಸೋಂಕಿನಿಂದ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಲ್ಯಾಪ್ರೋಸ್ಕೋಪಿಕ್ ಸರ್ಜರಿ ಮೂಲಕ ಕಲ್ಲು ಹೊರ ತೆಗೆದಿದ್ದೇವೆ. ಈಗ ಅವರು ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಸಿದ್ದು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಸುಮಾರು 45 ನಿಮಿಷಗಳ ಕಾಲ ಸಿದ್ದರಾಮಯ್ಯ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅವರಿಗೆ ಈಗ ತೀವ್ರ ನಿಗಾ ಘಟದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದರು.

ಸಿದ್ದು ಅವರಿಗೆ ಹೃದಯ ಸಂಬಂಧಿ ತೊಂದರೆ ಇದೆ ಎಂದು ನಾವು ಊಹಿಸಿದ್ದೆವು. ಆದರೆ ಅವರಿಗೆ ಯಾವುದೇ ಹೃದ ಸಂಬಂಧಿ ಕಾಯಿಲೆ ಇಲ್ಲ ಎಂದು ಡಾ.ರವಿಕುಮಾರ್ ಅವರು ತಿಳಿಸಿದರು.

ಒಂದು ದಿನದ ನಂತರ ಸಿದ್ದರಾಮಯ್ಯ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಮತ್ತು ಅವರಿಗೆ ಐದು ದಿನಗಳ ವಿಶ್ರಾಂತಿ ಅಗತ್ಯ ಇದೆ ಎಂದು ವೈದ್ಯರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement