ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹೈ-ಕ ಸರ್ಕಾರಿ ಕಚೇರಿ ಸಮಯ ಬದಲು

ಹೈ-ಕ ಭಾಗದ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಆದೇಶ ಹೊರಡಿಸಿದ್ದಾರೆ.

Srinivasa Murthy VN
Updated On : 4 Apr 2013, 7:22 am

ಬೆಂಗಳೂರು: ಹೈದರಾಬಾದ್-ಕರ್ನಾಟಕ ಭಾಗದ ಎಲ್ಲ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಆದೇಶ ಹೊರಡಿಸಿದ್ದಾರೆ.

ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ಮಧ್ಯಾಹ್ನದ ಹೊತ್ತಿನಲ್ಲಿ ಕೆಲಸ ಮಾಡುವುದು ದುಸ್ತರವಾಗುತ್ತಿದೆ ಎಂಬ ಅಧಿಕಾರಿಗಳ ಮನವಿಯ ಮೇರೆಗೆ ಶಾಲಿನಿ ರಜನೀಶ್ ಅವರು ಈ ಕ್ರಮ ಕೈಗೊಂಡಿದ್ದಾರೆ. ನೂತನ ವೇಳಾಪಟ್ಟಿಯಂತೆ ಹೈದರಾಬಾದ್-ಕರ್ನಾಟಕ ಭಾಗದ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಮಾತ್ರ ಕಾರ್ಯ ನಿರ್ವಹಿಸಲಿದೆ.

ನೂತನ ವೇಳಾಪಟ್ಟಿ ನಾಳೆಯಿಂದಲೇ ಜಾರಿಗೊಳ್ಳಲ್ಲಿದ್ದು, ಈ ಬಗ್ಗೆ ಎಲ್ಲ ಸರ್ಕಾರಿ ಕಚೇರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ನೂತನ ವೇಳಾಪಟ್ಟಿ ನಾಳೆ ಜಾರಿಗೆ ಬರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement