ಶಾಸಕ ಸಂಜಯ್ ಪಾಟೀಲ್ ಬಂಧನ
ಬೆಳಗಾವಿ ಗ್ರಾಮಾಂತರ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿ, ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ.
ಬೆಳಗಾವಿ: ಬೆಳಗಾವಿ ಗ್ರಾಮಾಂತರ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿ, ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬೆಳಗಾವಿಯ ತಿಲಕವಾಡಿ ಠಾಣೆಯ ಪೊಲೀಸರು ಸಂಜಯ್ ಪಾಟೀಲ್ ಅವರನ್ನು ಬಂಧಿಸಿದ್ದರು.
ಶಾಸಕರು ನೀತಿ ಸಂಹಿತೆ ಉಲ್ಲಂಘಿಸಿ, ಗೊಮ್ಮಟೇಶ್ವರ ವಿದ್ಯಾಪೀಠದಲ್ಲಿ ಭೋಜನ ಕೂಟ ಏರ್ಪಡಿಸಿದ್ದರು. ಈ ಸಂಬಂಧ ಅವರ ವಿರುದ್ಧ ದೂರ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ, ವಿಚಾರಣೆ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.