ಬಿಜೆಪಿಗೆ ಸಚಿವ ಆನಂದ್ ಸಿಂಗ್ ಗುಡ್ಬೈ
ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗುವ ಎಲ್ಲ ಲಕ್ಷಣಗಳು ಗೊಚರಿಸುತ್ತಿದ್ದು, ಸಚಿವ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಹಾಗೂ ..
ಬೆಂಗಳೂರು: ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗುವ ಎಲ್ಲ ಲಕ್ಷಣಗಳು ಗೊಚರಿಸುತ್ತಿದ್ದು, ಸಚಿವ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಹೊಸಪೇಟೆಯ ವಿಜಯನಗರ ಶಾಸಕ ಆನಂದ್ ಸಿಂಗ್ ಅವರು, ಏಪ್ರಿಲ್ 9ಕ್ಕೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಮತ್ತು ಅಂದೇ ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಬಿಜೆಪಿಯ ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತು ತಾವು ರಾಜಿನಾಮೆ ನೀಡುತ್ತಿದ್ದು, ರಾಜಿನಾಮೆ ಬಳಿಕ ಯಾವುದೇ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕ್ಷೇತ್ರದ ಕಾರ್ಯಕರ್ತರ ಸಲಹೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.