ಬಿಜೆಪಿಯ ಮತ್ತೆರಡು ವಿಕೆಟ್ ಪತನ
ಪಕ್ಷಾಂತರ ಪರ್ವ ಮುಂದುವರೆದಿದ್ದು, ಇಂದು ಮತ್ತೆ ಬಿಜೆಪಿಯ ಎರಡು ವಿಕೆಟ್ ಪತನವಾಗಿವೆ. ಮಸ್ಕಿ ಬಿಜೆಪಿ ಶಾಸಕ ಪ್ರತಾಪ್ ಗೌಡ ಪಾಟೀಲ್..
ಬೆಂಗಳೂರು: ಪಕ್ಷಾಂತರ ಪರ್ವ ಮುಂದುವರೆದಿದ್ದು, ಇಂದು ಮತ್ತೆ ಬಿಜೆಪಿಯ ಎರಡು ವಿಕೆಟ್ ಪತನವಾಗಿವೆ. ಮಸ್ಕಿ ಬಿಜೆಪಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಪ್ರತಾಪ್ಗೌಡ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಕೈ ಟಿಕೆಟ್ ಖಾತರಿಯಾಗುತ್ತಿದ್ದಂತೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಪ್ರತಾಪ್ ಗೌಡ ಅವರು ವಿಧಾನಸೌಧದಲ್ಲಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರನ್ನು ಭೇಟಿ ಮಾಡಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದು, ಇಂದು ಸಂಜೆ ಕಾಂಗ್ರೆಸ್ ಸೇರಲಿದ್ದಾರೆ.
ಇನ್ನು ಬಿಎಸ್ಆರ್ ಕಾಂಗ್ರೆಸ್ನೊಂದಿಗೆ ಗುರುತಿಸಿಕೊಂಡಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಅಳಿಯ ಕಂಪ್ಲಿ ಬಿಜೆಪಿ ಶಾಸಕರಾಗಿದ್ದ ಸುರೇಶ್ ಬಾಬು ಅವರು ಸಹ ಇಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.