ರಾಜಿಕೀಯ ನಿವೃತ್ತಿ ಘೋಷಿಸಿದ ಕೃಷ್ಣಯ್ಯ ಶೆಟ್ಟಿ
ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರು ಶನಿವಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮಾಲೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರು ಶನಿವಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ, ಮಾಲೂರಿನಲ್ಲಿ ಕೃಷ್ಣಯ್ಯ ಶೆಟ್ಟಿ ಅವರು ಬೆಂಬಲರೊಂದಿಗೆ ಸಭೆ ನಡೆಸಿ, ನಂತರ ರಾಜಕೀಯ ನಿವೃತ್ತಿ ಘೋಷಿಸಿದರು.
ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡಲಾರೆ ಎಂದಿರುವ ಕೃಷ್ಣಯ್ಯ ಶೆಟ್ಟಿ, ಇನ್ನು ಮುಂದೆ ತಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಜೈಲಿಗೆ ಹೋಗಿ ಬಂದವರಿಗೆ ಟಿಕೆಟ್ ನೀಡಬಾರದು ಎಂಬ ನಿರ್ಧಾರಕ್ಕೆ ಬಿಜೆಪಿ ಬಂದಿದ್ದು ಮತ್ತು ನಿನ್ನೆ ಪ್ರಕಟವಾದ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದಿರುವುದರಿಂದ ಬೇಸರಗೊಂಡು ಕೃಷ್ಣಯ್ಯ ಶೆಟ್ಟಿ ರಾಜಿಕೀಯ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ.