ಸಿದ್ದು ಡಿಸ್ಚಾರ್ಜ್, ಏ.8ಕ್ಕೆ ದೆಹಲಿಗೆ ಪ್ರಯಾಣ
ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್..
ಬೆಂಗಳೂರು: ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಇಂದು ವಿಕ್ರಂ ಆಸ್ಪತ್ರೆಯಿಂದ ಬಿಡುಗಡೆಯಾಗಲಿರುವ ಸಿದ್ದು ಅವರು, ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ವಿಶ್ರಾಂತಿ ಪಡೆದು, ನಂತರ ಏಪ್ರಿಲ್ 8ರಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಿಂದ ಹಿಂದಿರುಗಿದ ಬಳಿಕ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಿದ್ದು ಭಾಗವಹಿಸಲಿದ್ದಾರೆ.
ಸಿದ್ದು ಅವರು ಎರಡು ದಿನಗಳ ಕಾಲ ತಮ್ಮ ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸಿದ್ದರಾಮಯ್ಯ ಅವರ ಶುಗರ್, ಬಿಪಿ ನಿಯಂತ್ರಣದಲ್ಲಿದ್ದು, ಅವರು ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕಳೆದ ಗುರುವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ವೈದ್ಯರು ಸಿದ್ದು ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಪಿತ್ತಕೋಶದಲ್ಲಿದ್ದ ಕಲ್ಲು ಹೊರ ತೆಗೆದಿದ್ದರು.