ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಹಿಳಾ ದೌರ್ಜನ್ಯ ತಡೆಯಲು ಮತ್ತಷ್ಟು ಕ್ರಮ ಅಗತ್ಯ: ಪ್ರಧಾನಿ ಸಿಂಗ್

ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮತ್ತಷ್ಟು ಕಠಿಣ ಕ್ರಮಗಳಅಗತ್ಯವಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಹೇಳಿದ್ದಾರೆ.

Srinivasa Murthy VN
Updated On : 7 Apr 2013, 3:46 am

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಏರ್ಪಡಿಸಲಾಗಿದ್ದ ಮುಖ್ಯಮಂತ್ರಿಗಳ ಮತ್ತು ರಾಜ್ಯ ಹೈಕೋರ್ಟ್ ನ್ಯಾಯಾಧೀಶರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಸಿಂಗ್ ಅವರು ದೆಹಲಿ ಸಾಮೂಹಿಕ ಅತ್ಯಾಚಾರವನ್ನು ಖಂಡಿಸುತ್ತ ಸರ್ಕಾರದ ಮುಂದಿನ ಸವಾಲುಗಳ ಕುರಿತು ಮಾತನಾಡಿದರು.

'ಮಹಿಳಾ ದೌರ್ಜನ್ಯ ಮತ್ತು ಮಹಿಳೆಯರ ರಕ್ಷಣೆಯ ಕುರಿತು ಕೇಂದ್ರ ಸರ್ಕಾರ ಈಗಾಗಲೇ ಸಕಾಷ್ಟು ಪ್ರಬಲ ಕಾನೂನುಗಳನ್ನು ಕೈಗೊಂಡಿದ್ದು, ಈ ವಿಚಾರದಲ್ಲಿ ಸರ್ಕಾರ ಯಾವುದೇ ರೀತಿಯ ವಿಳಂಬ ಮಾಡದೇ ತ್ವರಿತಗತಿಯಲ್ಲಿ ಪ್ರತಿಕ್ರಿಯಿಸುತ್ತಿದೆ. ಇದಕ್ಕಾಗಿಯೇ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ಕಾನೂನುಗಳನ್ನು ರಚಿಸುವ ಕುರಿತು ಸರ್ಕಾರ ಯೋಚನೆ ಮಾಡುತ್ತಿದೆ' ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದರು.

ಈ ನಡುವೆ ಇಂದು ನಡೆಯುತ್ತಿರುವ ಹೈಕೋರ್ಟ್ ನ್ಯಾಯಾಧೀಶರ ಸಭೆಯಲ್ಲಿ ಪಾಲ್ಗೊಂಡಿರುವ ನ್ಯಾಯಾಧೀಶರು ಹಲವು ಬೇಡಿಕೆಗಳನ್ನು ಮನಮೋಹನ್ ಸಿಂಗ್ ಅವರ ಮುಂದಿಟ್ಟಿದ್ದಾರೆ. ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಮತ್ತಷ್ಟು ತ್ವರಿತಗತಿ ನ್ಯಾಯಾಲಯಗಳ ಸ್ಥಾಪನೆ, ಜಿಲ್ಲಾ ನ್ಯಾಯಾಲಯಗಳನ್ನು ದ್ವಿಗುಣಗೊಳಿಸುವುದು, ಹೈಕೋರ್ಟ್‌ಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳನ್ನು ಭರ್ತಿ ಮಾಡುವುದು ಸೇರಿದಂತೆ ನ್ಯಾಯಾಲಯಗಳ ಮೂಲಸೌಕರ್ಯಗಳನ್ನು ಹೆಚ್ಚಿಸುವ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ನ್ಯಾಯಾಧೀಶರು ಪ್ರಧಾನಿ ಸಿಂಗ್ ಅವರ ಮುಂದಿಟ್ಟಿದ್ದಾರೆ.

ನ್ಯಾಯಾಧೀಶರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಶೀಘ್ರದಲ್ಲಿಯೇ ಅವರ ಬೇಡಿಕೆಗಳನ್ನು ಈಡೇರಿಸುವ ಆಶ್ವಾಸನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement