ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ನಾಯಕರಿದ್ದ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರಿಗೆ ಆಗಮಿಸುತ್ತಿದ್ದ್ದ ಬಿಜೆಪಿ ನಾಯಕರಿದ್ದ ಖಾಸವಿ ವಿಮಾನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು..

Lingaraj Badiger
Updated On : 8 Apr 2013, 12:30 pm

ನವದೆಹಲಿ: ಬೆಂಗಳೂರಿಗೆ ಆಗಮಿಸುತ್ತಿದ್ದ್ದ ಬಿಜೆಪಿ ನಾಯಕರಿದ್ದ ಖಾಸಗಿ ವಿಮಾನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ನಡೆದಿದೆ.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವವಹಿಸಲು ಬೆಂಗಳೂರಿಗೆ ಆಗಮಿಸುತ್ತಿದ್ದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಅರುಣ್ ಜೇಟ್ಲಿ ಅವರಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಬಿಜೆಪಿ ನಾಯಕರು ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನ ವಾಪಸ್ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement