ವಿ.ವೈ ರಾಘವೇಂದ್ರ, ಶಿವಕುಮಾರ ಉದಾಸಿ ಅಮಾನತು
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಬಿಜೆಪಿ ಸಂಸದರನ್ನು ಸೋಮವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಬಿಜೆಪಿ ಸಂಸದರನ್ನು ಸೋಮವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಶಿವಮೊಗ್ಗ ಸಂಸದರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ಬಿ.ವೈ ರಾಘವೇಂದ್ರ ಹಾಗೂ ಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ಹೈಕಮಾಂಡ್ ಅಮಾನತುಗೊಳಿಸಿದೆ.
ಬಿಜೆಪಿಯಲ್ಲೇ ಇದ್ದುಕೊಂಡು ಯಡಿಯೂರಪ್ಪ ಅವರ ಕೆಜೆಪಿ ಪರ ಕೆಲಸ ಮಾಡುತ್ತಿದ್ದ ಈ ಇಬ್ಬರು ಸಂಸದನ್ನು ಅಮಾನತುಗೊಳಿಸುವಂತೆ ರಾಜ್ಯ ನಾಯಕರು ಮಾಡಿದ್ದ ಶಿಫಾರಸಿನ ಮೇರೆಗೆ ಬಿಜೆಪಿ ಹೈಕಮಾಂಡ್ ಅಮಾನತುಗೊಳಿಸಿದೆ.