ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಇರಾನ್‌ನಲ್ಲಿ ಪ್ರಬಲ ಭೂಕಂಪ: 3ಸಾವು

ಇರಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 3 ಮಂದಿ ಸಾವಿಗೀಡಾಗಿದ್ದಾರೆ.

Srinivasa Murthy VN
Updated On : 9 Apr 2013, 7:53 am

ತೆಹ್ರಾನ್: ಇರಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 3 ಮಂದಿ ಸಾವಿಗೀಡಾಗಿದ್ದಾರೆ.

ಮೃತ ಪಟ್ಟವೆರಲ್ಲರೂ ಕಾಕಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಭೂಕಂಪನದ ತೀವ್ರತೆ 6.3 ರಷ್ಟಿದ್ದು, ಭೂಕಂಪನದ ಕೇಂದ್ರಬಿಂದು ಪರಮಾಣು ಘಟಕವಿರುವ ಬುಷೇಹ್ರ್ ನಗರದ ಸಮೀಪದ ಇದೇ ಕಾಕಿ ಎಂಬ ಗ್ರಾಮ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕನಿಷ್ಟ 3 ಮಂದಿ ಸಾವಿಗೀಡಾಗಿದ್ದು, 15ಕ್ಕೂ ಅಧಿಕ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಖಾಸಗಿ ಸುದ್ದಿವಾಹಿನಿ ವರದಿ ಮಾಡಿದೆ.

ಕಾಕಿ ಗ್ರಾಮದ ಸುತ್ತಮುತ್ತಲಿನ ಸುಮಾರು 90 ಕಿಮೀ ವ್ಯಾಪ್ತಿಯಲ್ಲಿ ಭೂಕಂಪನ ಸಂಭವಿಸಿದ್ದು, ಭೂಮಿಯ 16 ಕಿಮೀ ಆಳದ ವರೆಗೆ ಭೂ ಕಂಪನ ಸಂಭವಿಸಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಪ್ರಬಲ ಭೂಕಂಪನದಿಂದಾಗಿ ಸಮೀದಲ್ಲಿದ್ದ ಪರಮಾಣು ಕೇಂದ್ರಕ್ಕೆ ಹಾನಿ ಸಂಭವಿಸಿರಬಹುದು ಎಂದು ವಿಜ್ಞಾನಿಗಳು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement