ಸಿಎಂ ಶೆಟ್ಟರ್ ವಿರುದ್ಧ ಸ್ಪರ್ಧೆಗೆ ಸಿದ್ಧ: ಬಿದರಿ
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬ ಬಗ್ಗೆ ಕಾಂಗ್ರೆಸ್...
ಬೆಂಗಳೂರು: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನಾಕಬೇಕು ಎಂಬ ಬಗ್ಗೆ ಕಾಂಗ್ರೆಸ್ ಗಂಭೀರ ಚಿಂತನೆ ನಡೆಸುತ್ತಿರುವುದರ ನಡುವೆಯೇ, ಸಿಎಂ ಶೆಟ್ಟರ್ ವಿರುದ್ಧ ಸ್ಫರ್ಧಿಸಲು ತಾವು ಸಿದ್ಧ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಅವರು ಮಂಗಳವಾರ ಹೇಳಿದ್ದಾರೆ.
ಶೆಟ್ಟರ್ ವಿರುದ್ಧ ತಮ್ಮನ್ನು ಕಣಕ್ಕಿಳಿಸುವ ಬಗ್ಗೆ ಯಾರೂ ತಮ್ಮೊಂದಿಗೆ ಚರ್ಚಿಸಿಲ್ಲ. ಆದರೆ ಪಕ್ಷ ತೀರ್ಮಾನಿಸಿದರೆ, ಶೆಟ್ಟರ್ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದು ಶಂಕರ್ ಬಿದರಿ ಹೇಳಿದ್ದಾರೆ.
ಇದೇ ವೇಳೆ ತಮ್ಮ ತವರೂರು ತೇರದಾಳದಿಂದ ನಟಿ ಉಮಾಶ್ರೀ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಬಿದರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಇನ್ನು ಶಂಕರ್ ಬಿದರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಟಿ ಉಮಾಶ್ರೀ ಅವರು, ಪಕ್ಷದಲ್ಲಿ ತಮಗೆ ಯಾರೂ ವಿರೋಧಿಗಳಿಲ್ಲ. ಶಂಕರ್ ಬಿದರಿ ಅವರು ಸಹ ನಮ್ಮ ಪಕ್ಷದವರೇ, ಅವರು ಸಹ ತಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ ಎಂದಿದ್ದಾರೆ.