ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ್ರಚೋದನಕಾರಿ ಭಾಷಣ: ಮಹಾ ಗೃಹ ಸಚಿವ ಪಾಟೀಲ್ ವಿರುದ್ಧ ಕೇಸ್

ಕಳೆದ ವಾರ ನಗರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್.ಪಾಟೀಲ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

Lingaraj Badiger
Updated On : 10 Apr 2013, 2:06 am

ಬೆಳಗಾವಿ: ಕಳೆದ ವಾರ ನಗರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್.ಪಾಟೀಲ್ ಅವರ ವಿರುದ್ಧ ಬುಧವಾರ ಕೇಸ್ ದಾಖಲಿಸಲಾಗಿದೆ.

ಪ್ರಚೋದನಕಾರಿ ಭಾಷಣ ಮಾಡಿದ ಹಾಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಹಾ ಗೃಹ ಸಚಿವರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಂಇಎಸ್‌ನ ಕಿರಣ್ ಥಾಕೂರ್ ಅವರ ಜನ್ನದಿನದ ಹಿನ್ನೆಲೆಯಲ್ಲಿ ಏಪ್ರಿಲ್ 7ರಂದು ಬೆಳಗಾವಿಯ ಸಂಬಾಜಿ ಉದ್ಯಾನವನದಲ್ಲಿ ಆಯೋಜಿಸದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಾಟೀಲ್, ಕರ್ನಾಟಕದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಬೆಳಗಾವಿಯಲ್ಲಿ ಎಂಇಎಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದ್ದು, ಕರ್ನಾಟಕ ಸರ್ಕಾರ ನಮ್ಮ ಕೈಗೊಂಬೆ ಆಗಲಿದೆ ಎಂದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement