ಮೊದಲ ದಿನವೇ ವರ್ತೂರ್ ಪ್ರಕಾಶ್ ನಾಮಪತ್ರ ಸಲ್ಲಿಕೆ
ಚುನಾವಣಾ ಆಯೋಗದಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರಬೀಳುತ್ತಿದ್ದಂತಯೇ ಕೋಲಾರ ವಿಧಾನಸಭಾ ಕ್ಷೇತ್ರದಿಂದ ವರ್ತೂರ್ ಪ್ರಕಾಶ್ ...
ಬೆಂಗಳೂರು: ಚುನಾವಣಾ ಆಯೋಗದಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರಬೀಳುತ್ತಿದ್ದಂತಯೇ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜವಳಿ ಸಚಿವ ವರ್ತೂರ್ ಪ್ರಕಾಶ್ ಅವರು ಬುಧವಾರ ತಮ್ಮ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣಾ ಅಖಾಡಕ್ಕಿಳಿದಿದ್ದಾರೆ.
ರಾಜಕೀಯ ಪಕ್ಷಗಳು ಇನ್ನು ಪಟ್ಟಿ ಪ್ರಕಟಿಸುವ ಗೊಂದಲದಲ್ಲಿ ಮುಳುಗಿವೆ. ಆದರೆ ಪಕ್ಷೇತರ ಅಭ್ಯರ್ಥಿಯಾಗಿ ವರ್ತೂರ್ ಪ್ರಕಾಶ್ ಅವರು ಅಧಿಸೂಚನೆ ಹೊರಬಿದ್ದ ಮೊದಲ ದಿನವೇ ತಮ್ಮ ನಾಮಪತ್ರ ಸಲಿಸಿದ್ದಾರೆ.
ವರ್ತೂರ್ ಪ್ರಕಾಶ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಸಿದರು.