ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು: 2 ಸಾವು
ಮುಜಾಫರಪುರ್ - ಯಶವಂತಪುರ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಹಳಿ ತಪ್ಪಿದ ಪರಿಣಾಮ ರೈಲಿನಲ್ಲಿದ್ದ..
ಚೆನ್ನೈ: ಮುಜಾಫರಪುರ್ - ಯಶವಂತಪುರ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಹಳಿ ತಪ್ಪಿದ ಪರಿಣಾಮ ರೈಲಿನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು 50ಕ್ಕು ಹೆಚ್ಚು ಜನ ಗಾಯಗೊಂಡಿರುವ ದುರ್ಘಟನೆ ಬುಧವಾರ ಸಂಭವಿಸಿದೆ.
ಇಲ್ಲಿಂದ 60 ಕಿ.ಮಿ ದೂರದ ಅರಕೋಣಂನ ಚಿತ್ತೇರಿ ಬಳಿ ಇಂದು ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ದಕ್ಷಿಣ ವಲಯ ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತ ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರೇಲ್ವೆ ಅಪಘಾತದಿಂದಾಗಿ ಅರಕೋಣಂ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.