ನಿರ್ಮಾಪಕ ಆನಂದ್ ಅಪ್ಪುಗೋಳ ಜೆಡಿಎಸ್ಗೆ ಸೇರ್ಪಡೆ
ಬೆಂಗಳೂರು: ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಅವರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕೇಂದ್ರ ಕಛೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ಗೆ ಸೇರ್ಪಡೆಗೊಂಡರು.
ಮೇ 5ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭೆ ಕ್ಷೇತ್ರದಿಂದ ಆಪ್ಪುಗೋಳ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.