ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿಗೆ ಶಶಿಲ್ ನಮೋಶಿ ಗುಡ್‌ಬೈ?

ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಬಿಜೆಪಿಗೆ ಗುಡ್‌ಬೈ ಹೇಳುವುದು ಬಹುತೇಕ ಖಚಿತವಾಗಿದ್ದು, ಇನ್ನೆರಡು ದಿನಗಳಲ್ಲಿ ..

Lingaraj Badiger
Updated On : 12 Apr 2013, 4:24 am

ಗುಲ್ಬರ್ಗಾ: ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಬಿಜೆಪಿಗೆ ಗುಡ್‌ಬೈ ಹೇಳುವುದು ಬಹುತೇಕ ಖಚಿತವಾಗಿದ್ದು, ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದ ನಮೋಶಿಗೆ ಬಿಜೆಪಿ ಟಿಕೆಟ್ ಕೈತಪ್ಪಿತ್ತು. ಈ ಹಿನ್ನೆಲೆಯಲ್ಲಿ ಅವರು ಜೆಡಿಎಸ್ ಸೇರಲು ನಿರ್ಧರಿಸಿದ್ದು, ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಗುಲ್ಬರ್ಗಾ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ನಂತರ, ತಮ್ಮ ಬೆಂಬಲಿಗರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ ಬಳಿಕ ನಮೋಶಿ ಅವರು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.

ಈ ಮುಂಚೆ ಜಿಡಿಎಸ್ ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಟಿಕೆಟ್ ಘೋಷಣೆಯಾದ ನಂತರ ರೇವೂರ್ ಜೆಡಿಎಸ್ ಟಿಕೆಟ್ ನಿರಾಕರಿಸಿ ಬಿಜೆಪಿ ಟಿಕೆಟ್ ಪಡೆದುಕೊಂಡಿದ್ದಾರೆ. ಇದರಿಂದ ಈ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಮೋಶಿ ತೀವ್ರ ಅಸಮಾದಾನಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement