ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರು ಸಜೀವ ದಹನ
ಮೈಸೂರಿನ ಬೀಡಿ ಕಾಲೋನಿಯ ಮನೆಯೊಂದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಿಸಿ, ಇಬ್ಬರು ಮಕ್ಕಳು ಸೇರಿದಂತೆ ಒಂದೇ..
ಮೈಸೂರು: ಮೈಸೂರಿನ ಬೀಡಿ ಕಾಲೋನಿಯ ಮನೆಯೊಂದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಿಸಿ, ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬ ಐವರು ಸಜೀವ ದಹನವಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಅಮೀರ್ ಜಾನ್(80), ಫರ್ವೀನ್(30), ರಿಜ್ವಾನ್(45) ಅರ್ಬಿನಾ(10) ಹಾಗೂ ಎರಡು ವರ್ಷದ ಅರಾನ್ ಮೃತಪಟ್ಟಿದ್ದಾರೆ. ಇನ್ನು ಈ ಬಗ್ಗೆ ಹಲವು ಸಂಶಯಗಳು ವ್ಯಕ್ತವಾಗುತ್ತಿದ್ದು, ದುಷ್ಕರ್ಮಿಗಳು ಹೆಳೆ ದ್ವೇಷ ತೀರಿಸಿಕೊಳ್ಳಲು ಈ ಕೃತ್ಯ ಎಸಗಿರಬುಹುದು ಎನ್ನಲಾಗುತ್ತಿದ್ದೆ.
ಈ ದುರ್ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ನಗರದ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಹೊರಗಿನಿಂದ ಚಿಲಕ ಹಾಕಿ ಬೆಳಗಿನ ಜಾವ 3.30ರ ಸುಮಾರಿಗೆ ಮನೆಗೆ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ ನಂತರವೇ ಈ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಉದಯಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.