ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಪವಾರ್
ನವದೆಹಲಿ: ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಶನಿವಾರ ಹೇಳಿದ್ದಾರೆ.
ಶರದ್ ಪವಾರ್ ಅವರು ಮುಂದಿನ ಲೋಕಸಭೆ ಚುನಾವಣೆ ಸಂಬಂಧ ತೃತೀಯ ರಂಗ ರಚನೆಯನ್ನು ತಳ್ಳಿ ಹಾಕಿದ ಕೇಲವೆ ದಿನಗಳಲ್ಲಿ ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ ಘೋಷಿಸಿದ್ದಾರೆ.
ತೃತೀಯ ರಂಗ ರಚನೆ ಕುರಿತಾಗಿ ಮಾತನಾಡಿದ್ದ, ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪವಾರ್ ಅವರು ತೃತೀಯ ರಂಗ ರಚನೆಯಾಗುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.