ಮೊಬೈಲ್ ಚಾರ್ಜರ್ ವೈರ್ನಿಂದ ವಿದ್ಯಾರ್ಥಿ ಆತ್ಮಹತ್ಯೆ
ನವದೆಹಲಿ: ಮಾನಸಿಕ ತೊಳಲಾಟದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಡೇತ್ನೋಟ್ ಬರೆದಿಟ್ಟು, ಹಾಸ್ಟಲ್ನಲ್ಲಿ ಚಾರ್ಜರ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿ ಮಣಿಪುರ ಮೂಲದ ಕ್ರಿಪಾ ಸಿಂಗ್ ಎಂದು ತಿಳಿದುಬಂದಿದೆ. ದೆಹಲಿ ವಿಶ್ವವಿದ್ಯಾಲಯದ ಹಿಂದು ಕಾಲೇಜ್ನಲ್ಲಿ ಮ್ಯೂಸಿಕ್ ಕೋರ್ಸ್ನ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಕ್ರಿಪಾ ಸಿಂಗ್, ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿರುವ ವಿಷಯ ಭಾನುವಾರ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಕಾರ ಕ್ರಿಪಾಸಿಂಗ್ ಕಳೆದ ರಾತ್ರಿ ಹಾಸ್ಟಲ್ನಲ್ಲಿ ಡೇತ್ನೋಟ್ ಬರೆದಿಟ್ಟು, ತನ್ನ ಸಹಪಾಠಿಗಳು ಯಾರು ಇಲ್ಲದ ಸಮಯದಲ್ಲಿ ಮೊಬೈಲ್ ಚಾರ್ಜರ್ ವೈರ್ನಿಂದ ಕುತ್ತಿಗೆಗೆ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕ್ರಿಪಾಸಿಂಗ್ ಮಾನಸಿಕ ತೊಂದರೆಯಿಂದ ಬಳಲುತ್ತಿದ್ದು, ಕೆಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಈತನ ಸಂಬಂಧಿಕರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕ್ರಿಪಾ ಸಿಂಗ್ನ ಮೃತದೇಹವನ್ನು ಪೋಸ್ಟ್ ಮಾರ್ಟಮ್ಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.