ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಟಿ ರಕ್ಷಿತಾ ಜೆಡಿಎಸ್ ಸೇರ್ಪಡೆ

ಬಿಎಸ್‌ಆರ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ನಟಿ ರಕ್ಷಿತಾ ಪ್ರೇಮ್ ಅವರು ಜೆಡಿಎಸ್ ಸೇರುವ ಸಾಧ್ಯತೆ ಇದೆ. ಈ ಸಂಬಂಧ ಅವರು ..

Lingaraj Badiger
Updated On : 15 Apr 2013, 4:08 am

ಬೆಂಗಳೂರು: ಬಿಎಸ್‌ಆರ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ನಟಿ ರಕ್ಷಿತಾ ಪ್ರೇಮ್ ಅವರು ಜೆಡಿಎಸ್ ಸೇರುವ ಸಾಧ್ಯತೆ ಇದೆ. ಈ ಸಂಬಂಧ ಅವರು ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೊಂದಿಗೆ ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.

ಇಂದು ಮಧ್ಯಾಹ್ನ ತಮ್ಮ ಪತಿ ಪ್ರೇಮ್ ಅವರೊಂದಿಗೆ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿರುವ ರಕ್ಷಿತಾ, ಜೆಡಿಎಸ್ ಸೇರುವ ಬಗ್ಗೆ ಮಾಜಿ ಪ್ರಧಾನಿಯೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಾಮರಾಜನಗರದಿಂದ ಸ್ಪರ್ಧಿಸಲು ನಿರ್ಧರಿಸಿದ್ದ ರಕ್ಷಿತಾ, ಸ್ಥಳೀಯ ಕಾರ್ಯಕರ್ತರ ವಿರೋಧ ಹಾಗೂ ಪಕ್ಷದ ನಾಯಕರ ಅಸಹಕಾರದಿಂದಾಗಿ ಈಗ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ.

ಜೆಡಿಎಸ್ ಸೇರುಲು ನಿರ್ಧರಿಸಿರುವ ರಕ್ಷಿತಾ ಇನ್ನು ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement