ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಂಗೇರಿದ ಚುನಾವಣ ಕಣ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

ಇಂದು ವಿಜಯ ನಾಮ ಸಂವತ್ಸರದ ವಸಂತ ಮಾಸ. ಇದು ನಿಜಕ್ಕೂ ಶುಭಮೂರ್ಹತ ಎಂದು ಭಾವಿಸಿರುವ ಹಲವು ..

Lingaraj Badiger
Updated On : 15 Apr 2013, 1:51 am

ಬೆಂಗಳೂರು: ಇಂದು ವಿಜಯ ನಾಮ ಸಂವತ್ಸರದ ವಸಂತ ಮಾಸ. ಇದು ನಿಜಕ್ಕೂ ಶುಭಮೂರ್ಹತ ಎಂದು ಭಾವಿಸಿರುವ ಹಲವು ಘಟಾನುಘಟಿ ರಾಜಕಾರಣಿಗಳು ಸೋಮವಾರ ನಾಮುಂದು, ತಾಮುಂದು ಎಂದು ನಾಮಪತ್ರ ಸಲ್ಲಿಸಿದರು.

ಬಿಜೆಪಿ ತೊರೆದು ಕೆಜೆಪಿ ಕಟ್ಟಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ, ತೆರೆದ ವಾಹನದಲ್ಲಿ ಮೆರವಣಿಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ, ನನ್ನ ಪ್ರತಿಸ್ಪರ್ಧಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ. ಶಿಕಾರಿಪುರದ ಮತದಾರರು ತಮ್ಮ ಕೈ ಹಿಡಿಯಲಿದ್ದಾರೆ ಎಂದು ಹೇಳಿದರು.

ಇನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ತಮಗೆ ಇದು ಕೊನೆಯ ಚುನಾವಣೆ ಎಂದು ಹೇಳಿದರು. ಅಲ್ಲದೆ ತಾವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.

ಕೊರಟಗೆರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಸಹ ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ತಾವು ಸಹ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಹೈಕಮಾಂಡ್ ಆ ಜವಾಬ್ದಾರಿ ವಹಿಸಿದರೆ ಅದನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement