ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶರಣಾಗತಿ ಸಮಯ ವಿಸ್ತರಿಸಲು ದತ್ ಮನವಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣದ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು, ತಮ್ಮ ಶರಣಾಗತಿ ಕಾಲಾವಕಾಶವನ್ನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ.

Srinivasa Murthy VN
Updated On : 15 Apr 2013, 5:01 am

ನವದೆಹಲಿ: ಅಕ್ರಮ ಶಸ್ತ್ರಾಸ್ತ್ರ ಪ್ರಕರಣದ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು, ತಮ್ಮ ಶರಣಾಗತಿ ಕಾಲಾವಕಾಶವನ್ನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದಲ್ಲಿ ಅಪರಾಧಿಯಾಗಿರುವ ಸಂಜಯ್ ದತ್ ಅವರು, ತಮ್ಮ ಪ್ರಕರಣದ ಕ್ಷಮಾದಾನದ ಅರ್ಜಿ ರಾಜ್ಯಪಾಲರ ಮುಂದಿದ್ದು, ರಾಜ್ಯಪಾಲರು ನಿರ್ಧಾರ ಕೈಗೊಳ್ಳುವವರೆಗೂ ತಮ್ಮ ಶಿಕ್ಷೆಗೆ ತಡೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ.

ಒಟ್ಟು ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಜಯ್ ದತ್, ವಿಚಾರಣೆ ವೇಳೆ ಒಂದೂವರೆ ವರ್ಷಗಳ ಶಿಕ್ಷೆಯನ್ನು ಈಗಾಗಲೇ ಅನುಭವಿಸಿದ್ದಾರೆ. ಉಳಿದಿರುವ ಮೂರೂವರೆ ವರ್ಷಗಳ ಶಿಕ್ಷೆಯನ್ನು ಅನುಭವಿಸಲು ಶರಣಾಗತಿಗಾಗಿ ತಮಗೆ ನಾಲ್ಕು ವಾರಗಳ ಕಾಲ ಸಮಯ ನೀಡಬೇಕು ಎಂದು ಸಂಜಯ್ ದತ್ ಮನವಿ ಸಲ್ಲಿಸಿದ್ದಾರೆ.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕಳೆದ ಮಾರ್ಚ್ 21ರಂದು ಸಂಜಯ್‌ದತ್ ಅಪರಾಧಿ ಎಂದು ತೀರ್ಪು ನೀಡಿತ್ತು. ಅಲ್ಲದೆ ಸಂಜಯ್ ದತ್ ಅವರಿಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ, ಏಪ್ರಿಲ್ 18ರೊಳಗೆ ಶರಣಾಗುವಂತೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement