ಕೊನೆಯ ದಿನದಂದು 946 ನಾಮಪತ್ರ ಸಲ್ಲಿಕೆ
ಬೆಂಗಳೂರು: 2013ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದು, 946 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮೇ 5ರಂದು ನಡೆಯುವ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 2947 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ರಾಜ್ಯ ಚುನಾವಣೆ ಅಧಿಕಾರಿ ಅನಿಲ್ಕುಮಾರ್ ಝಾ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ 408, ಬಿಜೆಪಿಯಿಂದ 360, ಜೆಡಿಎಸ್ನಿಂದ 309, ಕೆಜೆಪಿ 230, ಬಿಎಸ್ಆರ್ 131, ಪಕ್ಷೇತ್ತರರಿಂದ 1051 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಗುರುವಾರ ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ ಎಂದು ಚುನಾವಣಾಧಿಕಾರಿ ಹೇಳಿದ್ದಾರೆ.