ಬಿಜೆಪಿ ನಾಯಕರೇ ಟಾರ್ಗೆಟ್: ಆರ್.ಅಶೋಕ್
ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ..
ಬೆಂಗಳೂರು: ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಆರ್.ಅಶೋಕ್ ಅವರು ಬುಧವಾರ ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಇಂದು ಬೆಳಗ್ಗೆ ಸಂಭವಿಸಿದ ಬಾಂಬ್ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಇದು ಚುನಾವಣಾ ಸಮಯವಾಗಿದ್ದರಿಂದ ಬಿಜೆಪಿ ಕಚೇರಿಗೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಬರುತ್ತಾರೆ. ಅವರನ್ನೆ ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಾಲಿಗಿದೆ ಎಂದಿದ್ದಾರೆ.
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅಶೋಕ್, ಇದೊಂದು ಹೇಯ ಕೃತ್ಯ ಎಂದಿದ್ದಾರೆ. ಸ್ಫೋಟದಲ್ಲಿ 11 ಪೊಲೀಸರು, ಹಾಗೂ 5 ಜನ ಸಾರ್ವಜನಿಕರು ಗಾಯಗೊಂಡಿದ್ದು, ಪ್ರಕರಣದ ಬಗ್ಗೆ ಉನ್ನತ ತನಿಖೆ ನಡೆಸಲಾಗುವುದು ಎಂದು ಅಶೋಕ್ ತಿಳಿಸಿದರು. ಇದೇ ವೇಳೆ ಸ್ಫೋಟದ ಹೊಣೆಯನ್ನು ಯಾವ ಸಂಘಟನೆಯನ್ನು ಹೊತ್ತುಕೊಂಡಿಲ್ಲ ಎಂದು ಅವರು ಹೇಳಿದರು.
ಇನ್ನು ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಗುಪ್ತಚರ ಇಲಾಖೆಯ ವೈಫಲ್ಯವೇ ಘಟನೆಗೆ ಕಾರಣ ಎಂದು ಹೇಳಿದ್ದಾರೆ.